23/12/2024
IMG-20240821-WA0073

ಬೈಲಹೊಂಗಲ-೨೧: ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಕರ್ನಾಟಕದ ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ರಾಜಭವನದ ಮೇಲೆ ದಾಳಿ ಮಾಡುವುದಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಹೇಳಿಕೆ ಖಂಡಿಸಿ ಬೈಲಹೊಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರಿಗೆ ಭಾಜಪ ಯುವ ಮೋರ್ಚಾ ಪದಾಧಿಕಾರಿಗಳು ಭೇಟಿಯಾಗಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ನಿರ್ದೇಶನ ನೀಡುವಂತೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಭಾ.ಜ.ಪಾ ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ್ ಅಮ್ಮಿನಬಾವಿ, ಭಾ.ಜ.ಪಾ ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಎಸ್.ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜು ಮರಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ, ಗೌಡಪ್ಪ ಹೊಸಮನಿ, ಯುವ ಮೋರ್ಚಾ ಮಂಡಲ ಕಾರ್ಯದರ್ಶಿ ನಾಗಪ್ಪ ಸಂಗೊಳ್ಳಿ, ಸುನಿಲ್ ಮಾಳೋದೆ, ಸೋಮು ಉಳ್ಳಾಗಡ್ಡಿ, ಸೋಮನಿಂಗ್ ಕಡಕೋಳ,ಬಸವರಾಜ್ ಪೆಂಟೇದ, ನವೀನ್ ತಲ್ಲೂರ, ಸೋಮು ಏಣಗಿ,ಬಸನಿಂಗ ಭಾವಿಹಾಳ ಹಾಗೂ ಅನೇಕರು ಪಾಲ್ಗೊಂಡಿದ್ದರು.

error: Content is protected !!