ಬೆಳಗಾವಿ-೨೨:ತೀವ್ರ ಹದಗೆಟ್ಟಿದ್ದ ಸುಳಗಾ ರಸ್ತೆ ದುರಸ್ತಿ ಕಾಮಗಾರಿಯನ್ನು ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದ್ದರು.
ರಸ್ತೆ ದುರಸ್ತಿಗೆ ತಕ್ಷಣವೇ ಕ್ರಮಕೈಗೊಳ್ಳಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದರು.