ಕೌಜಲಗಿ-೨೪: ಪಟ್ಟಣದ ಪಿಕೆಪಿಎಸ್ ವಾಣಿಜ್ಯ ಮಳಿಗೆ ಹತ್ತಿರ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ತಳಿ ಹಾಗೂ ಕಲ್ಲಿನ ಕೋಟೆ ಆ.26ರಂದು ಉದ್ಘಾಟನೆಯಾಗಲಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಯಣ್ಣನ ಕಂಚಿನ ಮೂರ್ತಿಯನ್ನು ಹಾಗೂ ಕಲ್ಲಿನ ಕೋಟೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಗೋಕಾಕ ತಾಲೂಕಿನ ಕಳ್ಳಿಗುದ್ದಿ ಗ್ರಾಮದಲ್ಲಿ, ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಿರ್ಮಾಣವಾದ ಕಂಚಿನ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನಿರ್ಮಾಣವಾದ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಸಲ್ಲಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಅಧ್ಯಕ್ಷತೆಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಹಿಸಲಿದ್ದು, ಜಿಲ್ಲೆಯ ಶಾಸಕರು,ಸಂಸದರು ಚುನಾಯಿತ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಕೌಜಲಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷ ಡಾ ರಾಜೇಂದ್ರ ಸಣ್ಣಕ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.