23/12/2024
IMG 20240827 WA0072 -

ಬೆಳಗಾವಿ-೨೭: ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಉತ್ಕರ್ಷ ಪಾಟೀಲ್ ಹಾಗೂ ಉಪಾಧ್ಯಕ್ಷೆಯಾಗಿ ದೀಪಾ ನಾಮದೇವ ಹೊನಕಾಂಬಳೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯ ಮಾಜಿ ಶಾಸಕ ಶ್ರೀಮಂತ ಪಾಟೀಲ್ ಬೆಂಬಲಿತ ಬಣದ ಕೈ ಮೇಲಾಗಿದೆ.
ಅಲ್ಲದೆ ವಿಜಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಉತ್ಕೃಷ್ಟ ಪಾಟೀಲ್, ಪಕ್ಷಭೇದ ಮರೆತು ಎಲ್ಲ ಸದಸ್ಯರು ನನ್ನನ್ನು ಬೆಂಬಲಿಸಿದ್ದಾರೆ. ಅವರೆಲ್ಲರ ಸಲಹೆ ಸೂಚನೆಯಂತೆ ಶೇಡಬಾಳ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ. ನಮ್ಮ ಎಲ್ಲ ಸದಸ್ಯರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಪ್ರಮುಖವಾಗಿ ನಮ್ಮ ಆಯ್ಕೆಗೆ ಕಾರಣರಾದ ಮಾಜಿ ಶಾಸಕ ಶ್ರೀಮಂತ ಪಾಟೀಲ್ ಹಾಗೂ ಯುವನಾಯಕ ಶ್ರೀನಿವಾಸ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಮುಂಬರುವ ದಿನಗಳಲ್ಲಿ ಪಟ್ಟಣವನ್ನು ಮಾದರಿಯನ್ನಾಗಿಸಲು ಪಣತೊಟ್ಟಿದ್ದೇನೆ. ಪಟ್ಟಣದ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಇನ್ನೂ ಅವಶ್ಯಕತೆ ಇರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ ಎಂದು ಯುವನಾಯಕ ಉತ್ಕರ್ಷ ಪಾಟೀಲ್ ಹೇಳಿದರು.

error: Content is protected !!