ಮೂಡಲಗಿ-೨೮: ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಖುರಶಾದಬೇಗಂ ಅನ್ವರ ನದಾಫ್ ಮತ್ತು ಉಪಾಧ್ಯಕ್ಷರಾಗಿ ಭೀಮವ್ವ ದುರ್ಗಪ್ಪ ಪೂಜೇರಿ ಆಯ್ಕೆಯಾಗಿದ್ದಾರೆ. ಬುಧವಾರದಂದು ಜರುಗಿದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿ ನಡೆದ ಚುನಾವಣೆಯಲ್ಲಿ ಸಾಮಾನ್ಯ ವರ್ಗದ ಮಹಿಳೆ ಖುರಶಾದಬೇಗಂ ಅನ್ವರ್ ನದಾಫ್ ಅಧ್ಯಕ್ಷರಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನವು ಎಸ್ ಸಿ ಮಹಿಳೆಗೆ ಮೀಸಲಿತ್ತು.ಅದರಂತೆ ಈ ಸ್ಥಾನಕ್ಕೆ ಬೇರೆ ಯಾವುದೇ ನಾಮಪತ್ರಗಳು ಸಲ್ಲಿಕೆ ಆಗದಿರುವುದರಿಂದ ಭೀಮವ್ವ ದುರ್ಗಪ್ಪ ಪೂಜೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಉಪಾಧ್ಯಕ್ಷ ಸ್ಥಾನ ಅವಿರೋಧವಾಗಿ ಆಯ್ಕೆಯಾದವು. ಚುನಾವಣಾ ಅಧಿಕಾರಿಯಾಗಿ ತಹಸೀಲ್ದಾರ ಡಾ.ಮಹಾದೇವ ಸನ್ನಮುರಿ ಕರ್ತವ್ಯ ನಿರ್ವಹಿಸಿದರು.
ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸರ್ವ ಸದಸ್ಯರು ಶಾಸಕರ ಆಪ್ತ ಸಹಾಯಕರಾದ ದಾಸಪ್ಪ ನಾಯ್ಕ ಸಿ ಪಿ ಯಕ್ಸಂಬಿ, ಪುರಸಭೆ ಸವ೯ಸದಸ್ಯರು ಮುಖಂಡರು ಉಪಸ್ಥಿತಿರಿದ್ದರು.