ಬೆಳಗಾವಿ-೩೦:ದುಬೈನ ಓಮಾನ್ ಗೆ ಪ್ರವಾಸಕ್ಕೆಂದು ಹೋಗಿದ್ದ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಟುಂಬ ಪ್ರವಾಸಕ್ಕಾಗಿ ಓಮಾನ್ ಗೆ ತೆರಳಿತ್ತು. ಈ ವೇಳೆ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಗೋಕಾಕ್ ನ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ್, ಆದಿಶೇಷ ಎಂದು ಗುರುತಿಸಲಾಗಿದೆ. ದುಬೈನ ಹೈಮಾ ಪ್ರದೇಶದಲ್ಲಿ ಕುಟುಂಬದವರು ತೆರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಮುಖಾ ಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ನಾಲ್ವರು ಸ್ಥಳದಲ್ಲೇ ಸಜೀವದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹಗಳನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡುವಂತೆ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.