ಬೆಳಗಾವಿ-09: ವ್ಯಕ್ತಿಯೋರ್ವನಿಂದ ಹಲ್ಲೆಗೊಳಗಾಗಿರುವ ಅಂಗನವಾಡಿ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರ್ಥಿಕ ನೆರವು ನೀಡಿದ್ದಾರೆ.
ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿರುವ ಅಂಗನವಾಡಿ ಸಹಾಯಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕೈಯಿಂದ 30 ಸಾವಿರ ರೂ.ಗಳ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.