23/12/2024
ಚನ್ನಮ್ಮನ ಕಿತ್ತೂರು ಉತ್ಸವ-2024 ಪೂರ್ವಭಾವಿ ಸಭೆ (1)

ಚನ್ನಮ್ಮನ ವಿಜಯೋತ್ಸವದ ೨೦೦ನೇ ವರ್ಷದ ಅದ್ಧೂರಿ ಆಚರಣೆ ಸಿದ್ಧತೆಗೆ ಉಸ್ತುವಾರಿ ಸಚಿವರ ಸೂಚನೆ

ಬೆಳಗಾವಿ-೦೮: ಚನ್ನಮ್ಮನ ವಿಜಯೋತ್ಸವದ ೨೦೦ ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಪ್ರಸಕ್ತ ಸಾಲಿನ ಚನ್ನಮ್ಮ ಉತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ನಡೆದ ಸಭೆಯಲ್ಲಿ ಚನ್ನಮ್ಮ ಕಿತ್ತೂರು ಉತ್ಸವ-೨೦೨೪ರ ಪೂರ್ವಭಾವಿ ಸಿದ್ಧತಾ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಚನ್ನಮ್ಮನ ಕಿತ್ತೂರ ಉತ್ಸವ ೨೦೦ನೆ ವರ್ಷದ ವಿಜಯೋತ್ಸವದ ಅಂಗಾವಾಗಿ ಅದ್ದೂರಿ ಕಾರ್ಯಕ್ರಮ ಆಯೋಜಿಸಬೇಕು. ಉತ್ಸವದ ಹಿನ್ನಲೆಯಲ್ಲಿ ಕಿತ್ತೂರ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಉತ್ಸವದ ಅಂಗವಾಗಿ ಆಯೋಜಿಸಲಾಗುವ ಕ್ರೀಡಾಕೂಟಗಳಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚನ ಒತ್ತು ನೀಡಬೇಕು. ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಬೇಕು. ಮೂರು ದಿನಗಳ ಕಾಲ ಜರುಗಲಿರುವ ಚನ್ನಮ್ಮನ ಕಿತ್ತೂರ ಉತ್ಸವದ ಕಾರ್ಯಕ್ರಮದ ಪ್ರಯುಕ್ತ ವಿಚಾರ ಗೋಷ್ಠಿಗಳ ಆಯೋಜನೆಗೆ ಕ್ರಮ ವಹಿಸಲು ಸೂಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಸ್ಥಳೀಯ ಕಲಾವಿದರುಗಳಿಗೆ ಪ್ರಾಶಸ್ತ್ಯ  ನೀಡಬೇಕು. ಕಲಾವಿದರ ಆಯ್ಕೆಗೆ ಸಮಿತಿ ರಚಿಸಿ ಸಮಿತಿಯಿಂದ ಆಯ್ಕೆಯಾದಂತಹ ಕಲಾವಿದರಿಗೆ ಮಾತ್ರ ಅವಕಾಶ ನೀಡಬೇಕು. ಕಾರ್ಯಕ್ರಮದ ಪ್ರಯುಕ್ತ ನಿರ್ಮಿಸಲಾಗುವ ವೇದಿಕೆಗಳಿಗೆ ಸ್ವಾತಂತ್ರ್ಯ ಹೊರಾಟಗಾರರ ಹೆಸರಿಡಲು ಸೂಚಿಸಿದ ಅವರು ಆಮಂತ್ರಣ ಪತ್ರಿಕೆಯಲ್ಲಿ ಹೋರಾಟದಲ್ಲಿ ಪಾಲ್ಗೊಂಡ ವಂಶಜರ ಹೆಸರುಗಳನ್ನು ನಮೂದಿಸಲು ತಿಳಿಸಿದರು.
ಮಹಿಳಾ ಸಾಧಕಿಯರನ್ನು ಗುರುತಿಸಿ ಅವರಿಗೆ ಸನ್ಮಾನಿಸಬೇಕು. ಉತ್ಸವದ ದಿನಗಳಂದು ಆಗಮಿಸುವ ಸಾರ್ವಜನಿಕರಿಗೆ ಅಚ್ಚುಕಟ್ಟಾದ ಊಟ ಹಾಗೂ ಉಪಹಾರದ ವ್ಯವಸ್ಥೆ ಮಾಡಬೇಕು. ಚನ್ನಮ್ಮನ ವಿಜಯೋತ್ಸವದ ೨೦೦ ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೆ ಸಮಿತಿಯನ್ನು ರಚಿಸಬೇಕು. ವೇದಿಕೆ ಸಿದ್ಧತೆ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಜನಪದ ವಿಶ್ವವಿದ್ಯಾಲಯದಿಂದ ಲಾಂಛನ ತಯಾರಿಸಲು ತಿಳಿಸಿದ ಸಚಿವರು ರಾಣಿ ಚನ್ನಮ್ಮನ ಹಾಗೂ ಸ್ವಾತಂತ್ರö್ಯ ಹೋರಾಟಗಾರರು ಶಿಕ್ಷಣ ಇಲಾಖೆ ವತಿಯಿಂದ ರಾಜ್ಯದಲ್ಲಿ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲು ತಿಳಿಸಿದರು.
ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವದರ ಮೂಲಕ ಒಟ್ಟಾರೆಯಾಗಿ ಈ ಬಾರಿಯ ಚನ್ನಮ್ಮನ ೨೦೦ನೇ ವರ್ಷದ ವಿಜಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಚಿವರಾದ ಸತೀಶ ಜಾರಕಿಹೊಳಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ ಕಿತ್ತೂರ ಉತ್ಸವದ ಅಂಗವಾಗಿ ಈ ಬಾರಿ ಏರ್ ಶೋ ನಡೆಸಲು ಚಿಂತಿಸಾಗುತ್ತಿದೆ. ೨೦೦ ವರ್ಷಗಳ ನೆನಪಿಗಾಗಿ ಅಂಚೆ ಚೀಟಿ ಹಾಗೂ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರನ್ನು ಸ್ವಾಗತಿಸಲು ಪ್ರತ್ಯೇಕ ಶಿಷ್ಟಾಚಾರ ಸಮಿತಿಯನ್ನು ರಚಿಸಲಾಗುವದು. ರ. ಸ್ಮರಣ ಸಂಚಿಕೆ ಸಮಿತಿ ರಚಿಸಲು ಯೋಜಿಸಲಾಗಿದೆ. ಕಿತ್ತೂರ ಹಾಗೂ ಸ್ವಾತಂತ್ರ್ಯ  ಯೋಧರ ಕುರಿತು ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುವದರ ಜೊತೆಗೆ ವಾಯುವ್ಯ ಕರ್ನಾಟಕ ಸಾರಿಗೆ ಬದಲಾಗಿ ಕಿತ್ತೂರ ಕರ್ನಾಟಕ ಸಾರಿಗೆ ಎಂದು ನಾಮಕರಣ ಮಾಡಲು ಸಹ ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಉತ್ತರ ವಿಧಾನಸಭಾ ಶಾಸಕ ಆಸೀಫ್ (ರಾಜು) ಸೇಠ, ಬುಡಾ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮರ್ಬನ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ ಮೀನಾ, ಬೆಳಗಾವಿ, ಕಿತ್ತೂರು ಉಪವಿಭಾಗಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

error: Content is protected !!