23/12/2024
IMG-20240908-WA0001

ಸುವರ್ಣ ವಿಧಾನಸೌಧ ವೀಕ್ಷಣೆ

ಬೆಳಗಾವಿ-೦೮: ಬೆಳಗಾವಿ ಜಿಲ್ಲೆಗೆ ಭಾನುವಾರ ಆಗಮಿಸಿರುವ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ(Mrs.Jacqueline Mukangira) ಅವರು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶ್ರೀಮತಿ ಜಾಕ್ವೆಲಿನ್ ಅವರನ್ನು ಬರಮಾಡಿಕೊಂಡರು.

ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಿಸಿದರು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿವರಿಸಿದರು.

ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಇತರರು ಹಾಜರಿದ್ದರು.

error: Content is protected !!