ಬೆಳಗಾವಿ-10:ಬುಧವಾರ ದಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ವಿದ್ಯಾರ್ಥಿಗಳು ಬಸ್‌ನಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸಬೇಕಾಗಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮೂಲಕ ಮನವಿ ಅರ್ಪಿಸಿದರು.
ಈ ಪ್ರತಿಭಟನೆಯಲ್ಲಿ ರಾಜ್ಯ ಕಾನೂನು ವಿದ್ಯಾರ್ಥಿ ಸಂಚಾಲಕ ರೋಹಿತ್ ಉಮನಾಬಾದಿಮಠ,ನಗರ ಸಂಘಟನಾ ಕಾರ್ಯದರ್ಶಿ ಸಚಿನ್ ಹೀರೆಮಠ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ದರ್ಶನ ಹೆಗಡೆ,ಜಿಲ್ಲಾ ಸಂಚಾಲಕ ಪ್ರಶಾಂತ್ ಶಲ್ಲಿಕೇರಿ, ರಾಜ್ಯ ಸಹ ಕಾರ್ಯದರ್ಶಿ ಮನೋಜ್ ಪಾಟೀಲ್, ದೇವೇಂದ್ರ ಸನ್ನಮ್ಮನವರ, ಪ್ರಜ್ವಲ ನಾಯಕ, ಮಂಜುನಾಥ ಹಂಚಿನಮನಿ, ಮಲ್ಲು ಮುಕುಂದ, ಮಲ್ಲಿಕಾರ್ಜುನ ಪೂಜಾರಿ,ಯಲ್ಲಪ್ಪ ಬೊಮ್ಮನಹಳ್ಳಿ ಇನ್ನೂ ಅನೇಕರು ಪ್ರತಿಭಟನೆ ಯಲ್ಲಿ ಉಪಸ್ಥಿತರಿದ್ದರು.