ಬೆಂಗಳೂರು-೧೫: ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ನೇಮಕ ಮಾಡಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ.
ಕರ್ನಾಟಕ ಕೇಡರ್‌ನ 1998 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಜೂನ್ 2023 ರಲ್ಲಿ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಆಯುಕ್ತರಾಗಿ ನೇಮಕಗೊಂಡರು. ಈ ಹಿಂದೆ ಹೇಮಂತ್ ನಿಂಬಾಳ್ಕರ್ ಅವರು ಬೆಳಗಾವಿ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಜಂಟಿ ಆಯುಕ್ತರು (ಸಿಸಿಬಿ) ಬೆಂಗಳೂರು, ಹೆಚ್ಚುವರಿ ಆಯುಕ್ತರು (ಪೂರ್ವ), ಹೆಚ್ಚುವರಿ ಆಯುಕ್ತರು ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.