ಬೆಳಗಾವಿ-೧೮:ಮಧ್ಯರಾತ್ರಿ 3:30ರ ನಂತರ ಬೆಳಗಾವಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುವ ವಿಚಾರದಲ್ಲಿ ನಡೆದ ವಾಗ್ವಾದದಲ್ಲಿ ಮೂವರು ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆದಿದೆ.
ವೀರರಾಣಿ ಕಿತ್ತೂರು ಚನ್ನಮ ವೃತ್ತದಲ್ಲಿ ನಡೆದ ಗಣೇಶ ಮೆರವಣಿಗೆಯಲ್ಲಿ ಪಾಲ್ಗೊಂಡು ಡಿಜೆ ಟ್ಯೂನ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವರ ನಡುವೆ ಸಣ್ಣ ಪ್ರಮಾಣದ ಮಾರಾಮಾರಿ ನಡೆದಿದೆ. ಆಗ ಮಾತಿನ ಚಕಮಕಿ ನಡೆದಿದ್ದು, ಯುವಕನೊಬ್ಬ ಚಾಕು ತೆಗೆದು ಮೂವರು ಯುವಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ದಾಳಿಯಲ್ಲಿ ಮೂವರು ಯುವಕರ ಹೊಟ್ಟೆ ಮತ್ತು ಎದೆಗೆ ಇರಿದಿದ್ದಾರೆ. ಚಾಕುವಿನಿಂದ ದಾಳಿ ನಡೆಸಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ ಚನ್ನಮ್ಮ ವೃತ್ತ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಯಿತು. ಘಟನೆ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.