23/12/2024

ಬೆಳಗಾವಿ-೧೮:ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಟ್ರಾಲಿಯಡಿ ಸಿಲುಕಿ ಓರ್ವ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಅಹಿತಕರ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮೆರವಣಿಗೆಯಲ್ಲಿದ್ದ ಟ್ರ್ಯಾಕ್ಟರ್ ಕಪಿಲೇಶ್ವರ ಸೇತುವೆ ಮೇಲೆ ಸಾಗುತ್ತಿದ್ದಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಟ್ರಾಲಿಯಡಿ ಸಿಲುಕಿದ ವ್ಯಕ್ತಿಯನ್ನು ತಕ್ಷಣ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರು ಹಾಗೂ ಗಣೇಶೋತ್ಸವ ಮಂಡಳದ ಕಾರ್ಯಕರ್ತರು ಜಿಲ್ಲಾ ಆಸ್ಪತ್ರೆಯಲ್ಲಿ ಜಮಾಯಿಸಿದರು. ಇನ್ನೋರ್ವ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಸದಾನಂದ ಚವಾಣ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಅವರು ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಿಸಲು ಬಂದಿದ್ದರು.

error: Content is protected !!