ಬೆಳಗಾವಿ-೧೮:ಕುಂದಾನಗರಿ ಬೆಳಗಾವಿ ಯಲ್ಲಿ ನಗರದ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಘ್ನೇಶ್ವರನ ವಿಗ್ರಗಳನ್ನು ಸಾಯಂಕಾಲ ಶಾಂತಿ-ಸುವ್ಯವಸ್ಥೆಯಿಂದ ವಿಸರ್ಜನೆ ಮಾಡಲಾಯಿತು ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯಲ್ಲಿ ಬುಧವಾರ ಸಂಜೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ವಜನಾಂಗದ ಪ್ರಮುಖರು, ಯುವಕರು, ವಿವಿಧ ಧರ್ಮಿಯರು ಒಟ್ಟಾಗಿ ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಗಣೇಶನ ಮೇರವಣಿಗೆ ಮಾಡಿ, ಗಣೇಶನ ವಿಸರ್ಜನೆ ಮಾಡಲಾಗಿದೆ.
ಗಣೇಶನ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಸಿಗಬಹುದಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯಾದ್ಯಕ್ಷ ಎಚ್ ಎಂ ರೇವಣ್ಣ ಅವರು ಮಾತನಾಡಿ,
ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸಲು ತಾಲೂಕು ಮಟ್ಟದ ಸಮಿತಿ ಪ್ರತಿ ತಾಲೂಕಲ್ಲೂ ರಚನೆ ಮಾಡಲಾಗಿದೆ. ಗ್ರಾಮ, ತಾಲೂಕು ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗುವುದು. ಎಲ್ಲಾ ಅರ್ಹರಿಗೆ ಸೌಲಭ್ಯ ನೀಡಲು ಈ ಸಮಿತಿ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಸಮಿತಿ ಜನಪರವಾಗಿ ಕೆಲಸ ಮಾಡಲಿದೆ. ಗ್ಯಾರಂಟಿ ನಿಲ್ಲುವ ಪ್ರಶ್ನೆಯೇ ಇಲ್ಲ. ಗೌರಿ ಹಬ್ಬದ ದಿನ ಒಳ್ಳೆಯ ಕೆಲಸ ಮಾಡಿದ್ದೇವೆ. ಗ್ಯಾರಂಟಿ ಯಾವುದಾದರೂ ಸಮಸ್ಯೆಯಾದರೂ ಫಲಾನುಭವಿಗಳು ಕೂಡ ದಾಖಲೆ ಸರಿಪಡಿಸಿ ಕೊಳ್ಳಬೇಕು. ಇದೊಂದು ದೇಶದ ದೊಡ್ಡ ಯೋಜನೆ. ಸಿದ್ದರಾಮಯ್ಯ ಅವರ ಬಡವರ ಕಾಳಜಿ ಯೋಜನೆ ಎಂದು ಹೇಳಿದರು.
ಮಾಜಿ ಪ್ರಧಾನಿ ದಿ,ಇಂದಿರಾಗಾಂಧಿ ಅವರ ಕಾಲದಿಂದಲೂ ಕಾಂಗ್ರೆಸ್ ಬಡವರ ಪರವಾಗಿ ಕೆಲಸಮಾಡಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ಬಂದಿದೆ. ರಾಜ್ಯದ ಮಹಿಳೆಯರು ಕಾಂಗ್ರೆಸ್ ಯೋಜನೆಗೆ ಪುಲ್ ಮಾರ್ಕ್ಸ್ ನೀಡಿದ್ದಾರೆ. ಅನ್ನ ಭಾಗ್ಯ ಯೋಜನೆ ಸೇರಿದಂತೆ ಎಲ್ಲಾ ಯೋಜನೆಗಳು ರಾಜ್ಯದ ಜನತೆಗೆ ಬಹಳಷ್ಟು ಸಹಾಯ ಆಗಿದೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ಬಂದಿದೆ. ಈ ಗ್ಯಾರಂಟಿಯಲ್ಲಿ ಅಡೆತಡೆಗಳು ಆಗಿದರೆ ಸರಿಪಡಿಸಿಕೊಳ್ಳುವ ಉದ್ದೇಶದಿಂದ ಹಾಗೂ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ಯೋಜನೆಯಿಂದ ಹೊರಗುಳಿದ ಅರ್ಹರನ್ನು ಗ್ಯಾರಂಟಿ ನೀಡಲಾಗವುದು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿನಯ ನಾವಲಗಟ್ಜಿ,ಜಿಲ್ಲಾಧಿಕಾರಿ ಗಳು,ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ