ಬೆಳಗಾವಿ-೨೪: ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಈ ಕುರಿತು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಎಲ್ಲಾ ಶಾಸಕರು, ಸಚಿವರು, ಹೈಕಮಾಂಡ್ ಕೂಡ ಸಿಎಂ ಸಿದ್ದರಾಮಯ್ಯ ಅವರ ಪರ ಇದ್ದು, ಸಿಎಂ ಆಗಿ ಸ್ಥಾನದಲ್ಲಿ ಅವರೇ ಮುಂದುವರೆಯುತ್ತಾರೆ. ರಾಜೀನಾಮೆ ನೀಡುವ ಪ್ರಶ್ನೆ ಬರಲ್ಲ. ಹೈಕೋರ್ಟ್ ತನಿಖೆ ಮುಂದೆವರೆಸಬೇಕೆಂದು ಆದೇಶಸಿದೆ. ತನಿಖೆಯಾಗಲಿ, ತನಿಖೆಗೆ ಯಾರದು ಅಡ್ಡಿ ಇಲ್ಲಾ. ಯಾವ ರೀತಿಯ ಹೋರಾಟ ಮಾಡಬೇಕೆಂದು ಸಿಎಂ ಸಿದ್ದರಾಮ್ಯನವರೇ ನಿರ್ಧರಿಸುತ್ತಾರೆ ಎಂದು ತಿಳಿಸಿದರು.
ಇನ್ನು ಬಿಜೆಪಿಯವರು ಬೀದಿಯಲ್ಲಿ ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ನೀಡಿ ಎಂದರೆ ರಾಜೀನಾಮೆ ನೀಡುವ ಪ್ರಶ್ನೆ ಉದ್ಬವಿಸಲ್ಲ. ಸರ್ಕಾರದ ಹಣ ದುರ್ಬಳಕೆ ಆಗಿದ್ದರೆ ರಾಜೀನಾಮೆ ಕೇಳಬಹುದಿತ್ತು. ಇದರಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮುಡಾ ನಿವೇಶನ ಕೊಟ್ಟಿದ್ದಾರೆ ಎಂದು ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಈ ಹಿಂದಿನ ರಾಜ್ಯಪಾಲರು ಯಾರು ಕೂಡ ಸರ್ಕಾರಕ್ಕೆ ಎರಡು ದಿನಕ್ಕೊಂದು ಮಾಹಿತಿ ಕೇಳಿಲ್ಲ. ಕಾಂಗ್ರೆಸ್ ಸರ್ಕಾರ ಇರುವ ರಾಜ್ಯದಲ್ಲಿ ಬಿಜೆಪಿ ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸಾಕಷ್ಟು ಜನಪ್ರತಿನಿಧಿಗಳ ಬಗ್ಗೆ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿ ನಂತರ ಅವರಿಗೆ ಅವಶ್ಯಕತೆ ಇದ್ದಾಗ ಅವರನ್ನೇ ತಮ್ಮ ಪಕ್ಕದಲ್ಲಿ ಕುರಿಸಿಕೊಂಡು ರಾಜಕಾರಣ ಮಾಡುತ್ತಿರುವ ಉದಾಹರಣೆಗಳು ಸಾಕಷ್ಟಿವೆ. 25 ಕೇಂದ್ರ ಸಚಿವರ ಮೇಲೆ ಭ್ರಷ್ಟಾಚಾರ ಆರೋಪಗಳಿವೆ. ಅವರೆಲ್ಲರೂ ಅಧಿಕಾರದಲ್ಲಿ ಇದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕು ಎಂದು ಹೆಳಿದರು.
ಈ ಸಂದರ್ಭದಲ್ಲಿ ಶಾಸಕ ಆಸೀಫ್ (ರಾಜು) ಸೇಠ್, ಬೆಳಗಾವಿ ಬೂಡಾ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.