ಬೈಲಹೊಂಗಲ-೨೪: ನಾನು ತಪ್ಪೆ ಮಾಡಿಲ್ಲ ರಾಜ್ಯಪಾಲರು ಮನಸೋ ಇಚ್ಚೆ ಕಾರ್ಯನಿರ್ವಹಿಸುತಿದ್ದಾರೆ ಎಂದು ಆಪಾದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈ ಕೊರ್ಟನಲ್ಲಿ ಪ್ರಶ್ನಿಸಿದ್ದ ಪ್ರಕರಣ ವಜಾಗೊಳಿಸಿ 17ಎ ಪಿಸಿ ಆ್ಯಕ್ಟ್ ಪ್ರಕಾರ ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿರುವದು ಕಾನೂನಿಗೆ ಸಂದ ಜಯವಾಗಿದ್ದು ತಕ್ಷಣ ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯರಾದ ಎಫ್.ಎಸ್.ಸಿದ್ದನಗೌಡರ ಆಗ್ರಹಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರಕಟಣೆ ಮೂಲಕ ತಿಳಿಸಿದ ಅವರು, ಮುಖ್ಯಮಂತ್ರಿಯವರಿಗೆ ರಾಜೀನಾಮೆ ಕೊಡುವುದೊಂದೇ ದಾರಿ ಘನವೆತ್ತ ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ನ್ಯಾಯಾಲಯವೆ ಸುದೀರ್ಘವಾದ ವಾದ ವಿವಾದ ಆಲಿಸಿ ಈಗ ತೀರ್ಪು ಪ್ರಕಟಿಸಿದೆ. ಈ ಮಣ್ಣಿನ ಕಾನೂನನ್ನು ಪರಿಪಾಲಿಸುವ ಹಾಗೂ ಸಂವಿಧಾನ ರಕ್ಷಣೆಗೆ ಬದ್ದ ಎನ್ನುವ ಭಂಡತನ ತೊರಿಸುವ ಸಿದ್ದರಾಮಯ್ಯನವರೆ ಮೊದಲು ರಾಜಿನಾಮೆ ಸಲ್ಲಿಸಿ. ಈ ಹಿಂದೆ ಬಿ.ಎಸ್.ಯಡಿಯುರಪ್ಪನವರ ವಿರುದ್ದ ಭ್ರಷ್ಟಾಚಾರದ ಆಪಾದನೆ ಬಂದಾಗ ತಾವು ಯಾವ ರೀತಿ ವರ್ತಿಸಿದ್ದಿರಿ ಎಂಬುದನ್ನು ನೆನಪಿಸಿಕೊಂಡು ರಾಜಿನಾಮೆ ಕೊಡಿ. ಭ್ರಷ್ಟಾಚಾರ
ವಿರುದ್ಧ ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ. ‘ಸತ್ಯಮೇವ ಜಯತೇ’ ಎಂಬುದು ಸಾಬಿತಾಗಿದೆ.
ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದೇ ಸಂವಿಧಾನಬಾಹಿರ, ಅಪರಾಧ ಎಂದು ಆರೋಪಿಸಿದ ಕಾಂಗ್ರೆಸ್ಸಿಗರು, ಸಾರ್ವಜನಿಕವಾಗಿ ಕ್ಷಮೆ ಯಾಚನೆ ಮಾಡಬೇಕು. ಒಂದು ಸಾಂವಿಧಾನಿಕ ಹುದ್ದೆಯನ್ನು ಅಗೌರವಿಸಿದ ಕಾಂಗ್ರೇಸಿಗರು ಸಾರ್ವಜನಿಕ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ; ಅವರು ಕಾನೂನು ಪಂಡಿತರು. ಸಿಂಪಲ್ ಚೀಫ್ ಮಿನಿಸ್ಟರ್, ಕಾಸ್ಟ್ಲಿ ಲಾಯರನ್ನು ಕರೆಸಿ ವಾದ ಮಂಡಿಸಿದ್ದರು. ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್‍ಗಳೆಲ್ಲರೂ ಕಾಸ್ಟ್ಲಿ. ಅವರೆಲ್ಲರೂ ವಾದ ಮಾಡಿದ್ದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಾಗಿಲ್ಲ. ಇನ್ನೆಲ್ಲಿಗೆ ಹೋದರೂ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಗೆಲ್ಲುವುದಿಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ ಎಂದು ಎಚ್ಚರಿಸಿದರು.
ನೀವೂ ಸತ್ಯಕ್ಕೆ ಜೈ ಎನ್ನಿ. ಸಿದ್ದರಾಮಯ್ಯನವರೇ ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಿ ನಿಮ್ಮವರೆ ಸಿಎಂ ಕುರ್ಚಿಗೆ ಮುಗಿಬಿದಿದ್ದಾರೆ. ಅವರೆ ನಿಮ್ಮನ್ನು ಸಿಎಂ ಕುರ್ಚಿಯಿಂದ ಇಳಿಸುವ ಮೊದಲು ರಾಜಿನಾಮೆ ನೀಡಿ. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು.
ನೀವು ಎಸಿಬಿ ಮೂಲಕ ಸಾಕಷ್ಟು ಕೇಸುಗಳನ್ನು ಮುಚ್ಚಿ ಹಾಕಿದ್ದೀರಿ. ಭ್ರಷ್ಟಾಚಾರ ಪ್ರಕರಣ ಬಂದ ಕಾರಣ ಲೋಕಾಯುಕ್ತವನ್ನೂ ದುರ್ಬಲಗೊಳಿಸಿದ್ದೀರಿ. ಬಳಿಕ ಎಸಿಬಿ ಮೂಲಕ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡಿದ್ದೀರಿ. ಎಲ್ಲ ಕಾಲದಲ್ಲೂ ಇದು ನಡೆಯದೆಂಬ ಸತ್ಯ ನಿಮಗೆ ಅರಿವಾಗಿದೆ ಎಂದು ಭಾವಿಸುವುದಾಗಿ ತಿಳಿಸಿದರು.
ಸಿದ್ದರಾಮಯ್ಯನವರೇ, ನೀವು ನ್ಯಾಯಾಲಯದ ತೀರ್ಪನ್ನು ಗೌರವಿಸಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ನಿಮ್ಮ ಆತ್ಮಗೌರವಕ್ಕೆ ಚುತಿಯಾಗದಂತೆ ಪ್ರಕರಣವನ್ನು ಎದುರಿಸಿ ಎಂದು ಆಗ್ರಹಿಸಿದ್ದಾರೆ.ಪತ್ರಿಕಾ ಪ್ರಕಟಣೆ ತಿಳಿಸಿರುತ್ತಾರೆ.