23/12/2024
IMG-20240926-WA0002

ಬೆಳಗಾವಿ-೨೬: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಿದೆ ಎಂದು ಜನತಾದಳ ಜಾತ್ಯಾತೀತ (ಜೆಡಿಎಸ್)ಜಿಲ್ಲಾಧ್ಯಕ್ಷ  ಶಂಕರ ಮಾಡಲಗಿ ಎಚ್ಚರಿಸಿದ್ದಾರೆ.

ಹೈಕೋರ್ಟ್ ಹಾಗೂ ಜನಪ್ರತಿನಿಧಿ ನ್ಯಾಯಾಲಯದ ಆದೇಶದ ಮೇರೆಗೆ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿಯ ಚನ್ನಮ್ಮ ವೃತ್ತ ದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ನಂತರ ಉಪಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾರುತಿ ಅಷ್ಟಗಿ,ಬಿ.ಎಸ್.ರುದ್ರ ಗೌಡಾ ಇರನ್ನಾ ನಾಸೀರ ಬಾಗವಾನ ಸೇರಿದಂತೆ ನೂರಾರು ಜನತಾದಳ ಜಾತ್ಯಾತೀತ (ಜೆಡಿಎಸ್)  ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!