23/12/2024
IMG-20240803-WA0088

ಬೆಳಗಾವಿ-೦೫: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 279ನೇ ಶಿವಾನುಭವ ಹಾಗೂ ಹಾನಗಲ್ಲ ಕುಮಾರ ಶಿವಯೋಗಿಗಳ 157ನೇ ಜಯಂತಿ ಮಹೋತ್ಸವ ಕಾರ್ಯಕ್ರಮವು ಸೋಮವಾರ ದಿನಾಂಕ 7 ಅಕ್ಟೋಬರ್ 2024ರಂದು ಸಾಯಂಕಾಲ 6 ಗಂಟೆಗೆ ಜರುಗುವುದು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಶ್ರೀ ಜಗದೀಶ ಕವಟಗಿಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಬೈಲಹೊಂಗಲ ಮೂರುಸಾವಿರಮಠದ ಪೂಜ್ಯ ಶ್ರೀ ಪ್ರಭುನೀಲಕಂಠ ಮಹಾಸ್ವಾಮಿಗಳು “ಯುಗದ ಉತ್ಸಾಹ ಹಾನಗಲ್ಲ ಕುಮಾರ ಶಿವಯೋಗಿಗಳ ಸಮಾಜ ಸೇವೆ” ಎಂಬ ವಿಷಯ ಕುರಿತು ಅನುಭಾವ ನೀಡುವರು. ಇದೇ ಸಂದರ್ಭದಲ್ಲಿ ಚಿಕ್ಕೋಡಿ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ವೀಣಾ ಜಗದೀಶ ಕವಟಗಿಮಠ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಗುವುದು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!