ಬೆಳಗಾವಿ-೦೭:ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೋಮವಾರ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು.
ಇದಾದ ಬಳಿಕ ಸುಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ ಅವರ ಜತೆ ಚರ್ಚಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು.