ಬೆಳಗಾವಿ-೦೮: ಸಾಂತ್ವನ ಕೇಂದ್ರಗಳಿಗೆ ಪೊಲೀಸ್ ನೆರವು ಅಗತ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಅವರ ನೆರವು ಪಡೆದುಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ದೂರು ದಾಖಲಿಸಲು ಮುಂದಾಗುತ್ತಿಲ್ಲ. ದೂರು ದಾಖಲು ಮಾಡಲು ಕ್ರಮಕೈಗೊಳ್ಳಬೇಕು. ಸಾಂತ್ವನ ಕೇಂದ್ರಗಳಲ್ಲಿ ಗಂಭೀರ ಸಮಸ್ಯೆಗಳಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ನನ್ನನ್ನು ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಿದರು. ಪ್ರತಿ ಸಾಂತ್ವ ಕೇಂದ್ರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲು ಹಾಗೂ ಸಮಸ್ಯೆಗಳಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಎನ್ ಎಸ್, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಜಿಲ್ಲಾ ಕಾನೂನು ಸೇವಾ ಸಮಿತಿ ಸದಸ್ಯ ಎಸ್.ಎಸ್. ಕಿವುಡನವರ, ಜಿಲ್ಲಾ ಕಾರ್ಮಿಕ ಕಲ್ಯಾಣ ಅಧಿಕಾರಿ ಸಂಜೀವ ಭೋಸಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜು, ಮಹಿಳಾ ಪ್ರತಿನಿಧಿ ಸವಿತಾ ಹೆಬ್ಬಾರ, ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಾಂತ್ವನ ಕೇಂದ್ರಗಳ ಆಪ್ತ ಸಮಾಲೋಚಕರು ಮತ್ತಿತರರು ಹಾಜರಿದ್ದರು.