ಬೆಂಗಳೂರು-೧೦: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ನೀರಾವರಿ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.
ಉಪ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ವಿವಿಧ ಯೋಜನೆಗಳಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು ಎಂದು ಚನ್ನರಾಜ ತಿಳಿಸಿದ್ದಾರೆ.
ಈ ವೇಳೆ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕ ಎನ್.ಎಚ್. ಕೋನರೆಡ್ಡಿ ಪಾಲ್ಗೊಂಡಿದ್ದರು.