ಕಾರವಾರ-೧೪:ದಕ್ಷಿಣ ಭಾರತದ ಶಕ್ತಿ ಪೀಠ ದಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬ ದೇವಸ್ಥಾನದಲ್ಲಿ ವಸ್ತ್ರ ಸಂಹಿತಿ ಜಾರಿ ಮಾಡಿ ಆಡಳಿತ ಕಮಿಡಿ ಆದೇಶ ಮಾಡಿದೆ.
ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಉಡುಗೆ ತೊಡುಗೆ ಧರಿಸಿ ಬರಲು ಸೂಚನೆ ನೀಡಲಾಗಿದ್ದು ಈ ಸಂಬಂಧ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಫಲಕ ಅಳವಡಿಸಲಾಗಿದೆ.ಈ ಹಿಂದೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸಹ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದ್ದು ಇದೀಗ ಮಾರಿಕಾಂಬಾ ದೇವಸ್ಥಾನ ದಲ್ಲಿ ಸಹ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.
ದೇಗುಲಗಳಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವರ ದರ್ಶನ ಪಡೆಯಬೇಕೆಂದು ಮುಜರಾಯಿ ಇಲಾಖೆ ಆದೇಶ ಮಾಡಿತ್ತು .
ಇದರ ಬೆನ್ನಲ್ಲೇ ರಾಜ್ಯ ವಿವಿಧ ದೇಗುಲಗಳ ಜತೆ ಶಿರಸಿಯಲ್ಲೂ ವಸ್ತ್ರಸಂಹಿತೆ ಕಡ್ಡಾಯ ಮಾಡಲಾಗಿದೆ.ನವರಾತ್ರಿಯ ಸಂದರ್ಭದಲ್ಲಿ ಭಕ್ತರು ಹೆಚ್ಚು ಬರುತಿದ್ದು ಈ ಸಂದರ್ಭದಲ್ಲೇ ಕ್ಷೇತ್ರದ ವತಿಯಿಂದ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಕೆ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಭಾರತೀಯ ಸಂಸ್ಕೃತಿಯ ಉಡುಗೆ ತೊಡುಗೆಗಳನ್ನು ಕಡ್ಡಾಯ ಮಾಡುವ ಉದ್ದೇಶ ವಿದೆ.ದೇವಸ್ಥಾನ ಹೋಗುವಾಗ ಸಂಪ್ರದಾಯ ಪಾಲನೆ ಮಾಡಬೇಕೆಂಬ ಉದ್ದೇಶದಿಂದ ಆದೇಶ ಮಾಡಲಾಗಿದೆ.ಭಕ್ತರ ಸ್ಪಂದನೆ ಕೂಡಾ ಪರಿಗಣಿಸಿ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಶಿರಸಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ್ ಮಾಹಿತಿ ಕೊಟ್ಟಿದ್ದಾರೆ.