ಬೆಳಗಾವಿ-೧೫: ಕಳೆದ ವರ್ಷದಿಂದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಚಳವಳಿ ನಡೆಯುತ್ತಿದ್ದು, ಈ ಚಳವಳಿಗೆ ಸರಕಾರ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಕ್ಟೋಬರ್ 15 ರಂದು ಪಂಚಮಸಾಲಿ ಸಮಾಜದವರು ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದರು ಆದರೆ ಸಭೆಯ ಬಗ್ಗೆ ಮುಖ್ಯಮಂತ್ರಿಯಿಂದ ಯಾವುದೇ ಸೂಚನೆ ಬಂದಿಲ್ಲ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 18 ರಂದು ಪಂಚಮಸಾಲಿ ಸಮಾಜದ ವತಿಯಿಂದ ಚಲೋ ಬೆಂಗಳೂರಿಗೆ ಕರೆ ನೀಡಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಈವರೆಗೆ ಏಳು ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ನಮ್ಮ ಹೋರಾಟಕ್ಕೆ ಸರಕಾರದಿಂದ ನ್ಯಾಯ ಸಿಕ್ಕಿಲ್ಲ. ಸೆ.22ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.15ರಂದು ರಾಜ್ಯ ಮಟ್ಟದ ವಕೀಲರ ಪರಿಷತ್ತಿನಲ್ಲಿ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಐದನೇ ಬಾರಿಗೆ ಸಮುದಾಯದವರ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರೂ ಸಭೆಗೆ ಸಂಬಂಧಿಸಿದಂತೆ ಮಾಹಿತಿ ಬಂದಿಲ್ಲ. ಪಂಚಮಸಾಲಿ ವಕೀಲರ ಹೋರಾಟ ಹತ್ತಿಕ್ಕುವ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಪಂಚಮಸಾಲಿ ಸಮಾಜದ ವಕೀಲರು ಹಾಗೂ ಕಾರ್ಯಕರ್ತರು ಅಕ್ಟೋಬರ್ 18ರಂದು ಬೆಂಗಳೂರಿಗೆ ತೆರಳಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ಗಮನ ಸೆಳೆಯಲಿದ್ದಾರೆ.