ಬೆಳಗಾವಿ-೧೫:ನ.೦೧ ಕರ್ನಾಟಕ ರಾಜ್ಯೋತ್ಸವ ದಿನದಂದು ನಗರದಲ್ಲಿ ಕರಾಳ ದಿನ ಆಚರಣೆ ಅನುಮತಿ ನೀಡುವಂತೆ ಎಂಇಎಸ್(ಮಹಾರಾಷ್ಟ್ರ ಏಕೀಕರಣ ಸಮಿತಿ) ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮಹಮ್ಮದ ರೋಶನ್ ಭೇಟಿಯಾದ ಎಂಇಎಸ್ ನಾಯಕರು ನ.೦೧ ರಂದು ಕರಾಳ ದಿನಾಚರಣೆ ನಡೆಸಲು ಅನುಮತಿ ನೀಡುವಂತೆ ಕೊರಿದರು.ಗಡಿ ವಿವಾದ ಸುಪ್ರಿಂ ಕೋರ್ಟ್ನಲ್ಲಿದೆ ,ಇಲ್ಲಿನ ಮರಾಠಿ ಭಾಷಿಕರಿಗೆ ಅನ್ಯಾಯವಾಗಿದೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ,ಕರ್ನಾಟಕ ರಾಜ್ಯೋತ್ಸವಕ್ಕೆ ತೊಂದರೆಯಾಗದಂತೆ ಶಾಂತಿಯುತವಾಗಿ ಕರಾಳ ದಿನ ಆಚರಣೆಗೆ ಅನುಮತಿ ನೀಡಬೇಕೆಂದು ಕೇಳಿಕೊಂಡರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮಹಮ್ಮದ ರೋಶನ್ ಯಾವುದೇ ಕಾರಣಕ್ಕೂ ಕರಾಳ ದಿನ ಆಚರಣೆಗೆ ಅನುಮತಿ ನೀಡುವುದಿಲ್ಲ. ಅದ್ಧೂರಿ ರಾಜ್ಯೋತ್ಸವದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ.ಜಿಲ್ಲಾಡಳಿತ ನಿರ್ಧಾರಕ್ಕೆ ನೀವು ಬದ್ಧರಾಗಬೇಕೆಂದು ತಿಳಿಸಿದರು.
ದೀಪಕ ದಳವಿ.ಮೌಲೋಜಿರಾವ್ ಅಷ್ಟೆಕರ್,ಮನೋಹರ ಕಿಣೇಕರ ವಿಕಾಸ ಕಲಘಟಗಿ ಉಪಸ್ಥಿತಿರಿದ್ದರು.