23/12/2024
IMG-20241019-WA0000

ಬೆಳಗಾವಿ-೧೯; ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜವನ್ನು ಸರ್ಕಾರದಿಂದ ನಿರ್ಲಕ್ಷ ಮಾಡುವ ಕೆಲಸ ಆಗುತ್ತಿದೆ.‌ ಹೂಗಾರ ಮಾದಯ್ಯನವರ ಜಯಂತಿ ಸರ್ಕಾರಿ ಕಾರ್ಯಕ್ರಮ ಆಗಬೇಕು ಎಂದು ಬೆಳಗಾವಿ ಜಿಲ್ಲಾ ಹೂಗಾರ, ಗುರವ, ಜೀರ ಮತ್ತು ಪೂಜಾರ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಭು ಹೂಗಾರ ಆಗ್ರಹಿಸಿದರು.‌

ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತೋತ್ಸವ ಅಕ್ಟೋಬರ್ 20 ರಂದು ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ಶಿವಶರಣ ಹೂಗಾರ ಮಾದಯ್ಯನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ಇರಲಿದೆ. ಬಳಿಕ ಕುಮಾರ ಗಂಧರ್ವ ದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ, ಸಚಿವರು, ಲೋಕಸಭಾ ಸದಸ್ಯರು, ಶಾಸಕರು ಆಗಮಿಸಲಿದ್ದಾರೆ.

ನಮ್ಮ ಸಮಾಜಕ್ಕೆ ಆಗುತ್ತಿರುವ ಸಮಸ್ಯೆ ಬಗ್ಗೆ ಪರಿಹಾರ ಕಂಡುಕೊಳ್ಳಲ್ಲು ಜಯಂತಿ ದಿನ ಪ್ರಯತ್ನ ಮಾಡುತ್ತೇವೆ. 12 ನೇ ಶತಮಾನದಿಂದ ಬಸವಾದಿ ಶರಣರ ಮಾರ್ಗದರ್ಶನದಲ್ಲಿ ನಮ್ಮ ಸಮಾಜದವರು ನಡೆದುಕೊಂಡು ಬರುತ್ತಿದ್ದಾರೆ. ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನ ಸಂಖ್ಯೆ ಇದೆ. ಆದರೂ ನಮ್ಮ ಸಮಾಜವನ್ನು ಸರ್ಕಾರದಿಂದ ನಿರ್ಲಕ್ಷಿಸುವ ಕೆಲಸ ಆಗುತ್ತಿದೆ. ಹೂಗಾರ ಮಾದಯ್ಯನವರ ಸರ್ಕಾರಿ ಕಾರ್ಯಕ್ರಮ ಆಗಬೇಕು. ನಮ್ಮ ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಉಗ್ರವಾದ ಹೋರಾಟ ಮಾಡುತ್ತೇವೆ. ಈಗಾಗಲೆ ತಾಲೂಕು, ಜಿಲ್ಲಾ ಮಟ್ಟದ ಕಮೀಟಿಗಳು ಮಾಡಿದ್ದೇವೆ.‌ ಸರ್ಕಾರದಿಂದ ಸಿಗುವ ಸೌಲಭ್ಯಗಳು ಸಿಗುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇವೆ
ಎಂದು ಆಗ್ರಹಿಸಿದರು.

ಬೆಳಗಾವಿ ಜಿಲ್ಲಾ ಹೂಗಾರ, ಗುರವ, ಜೀರ ಮತ್ತು ಪೂಜಾರ ಇತರರು ಉಪಸ್ಥಿತಿರಿದ್ದರು.

error: Content is protected !!