ಬೆಳಗಾವಿ-೨೨:ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅಶೋಕ ದುಡಗುಂಟಿ ಅವರನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನದಲ್ಲಿ ಬಿ. ಶುಭಾ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಮೈಸೂರು ನಗರಾಭಿವೃದ್ಧಿ ಕೋಶದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶುಭಾ ಬಿ. ಅವರನ್ನು ಪಾಲಿಕೆ ಆಯುಕ್ತರಾಗಿ ನಿಯೋಜಿಸಲಾಗಿದೆ.