23/12/2024
IMG-20241030-WA0085

ಬೆಳಗಾವಿ-೩೧:ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ  ಶೆಟ್ಟರ್ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳಾದ  ಮೊಹಮ್ಮದ್ ರೋಷನ್ ಇವರ ಉಪಸ್ಥಿತಿಯಲ್ಲಿ ರೈಲ್ವೆ, ಏರ್ಪೋರ್ಟ್, ಬೆಳಗಾವಿ ರಿಂಗ್ ರಸ್ತೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಸಭೆ ನಡೆಸಿ, ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಪಡೆದುಕೊಂಡರು.

ಬೆಳಗಾವಿ- ಕಿತ್ತೂರು- ಧಾರವಾಡ ನೂತನ ರೈಲ್ವೆ ಮಾರ್ಗ ನಿರ್ಮಾಣ ಬಗ್ಗೆ ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಬೆಳಗಾವಿ ನಗರದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆ ಕುರಿತು ಹಾಗೂ ತಾನಾಜಿಗಲ್ಲಿಯ ಹತ್ತಿರ ಅಲ್ಲಿನ ನಿವಾಸಿಗಳ ಬೇಡಿಕೆಯಂತೆ ಎಲ್.ಸಿ ನಂತರ 386 ಹತ್ತಿರ ರಸ್ತೆ ಮೇಲು ಸೇತುವೆ ನಿರ್ಮಾಣ ಮಾಡದೇ ಇರುವ ಬಗ್ಗೆ ಆಗಬಹುದಾದ ಅನುಕೂಲತೆಗಳ ಕುರಿತು ಚರ್ಚಿಸಲಾಯಿತು.

ಇನ್ನು ರಿಂಗ್ ರಸ್ತೆ ನಿರ್ಮಾಣ ಅಂಗವಾಗಿ ಝಲಸಾಪುರ ಬಲಗಾ ಮಾರ್ಗ ನಿರ್ಮಾಣದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಭೂಸ್ವಾಧೀನ ಪ್ರಗತಿಯ ಕುರಿತು ಚರ್ಚಿಸಿ ನಿರ್ದಿಷ್ಟ ಕಾಲಮಿತಿಯಲ್ಲಿ ಪ್ರಕ್ರಿಯೆಯನ್ನು ಮುಗಿಸುವಂತೆ ಸಭೆಯಲ್ಲಿ ತಿಳಿಸಲಾಯಿತು. ಅದರಂತೆ ಬೆಳಗಾವಿ (ಶಿಗುಣಸಿ) – ಹುನಗುಂದ – ರಾಯಚೂರು ಮಾರ್ಗದ ಬಗ್ಗೆಯೂ ಮಾಹಿತಿ ಪಡೆಯಲಾಯಿತು.

ಮುಂದುವರೆದು ಬೆಳಗಾವಿ ಏರ್ಪೋರ್ಟ್ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಅಲ್ಲಿ ಅವಶ್ಯವಿರುವ ಮೂಲಭೂತ ಸೌಕರ್ಯ ಬಗ್ಗೆ ಮಾಹಿತಿ ಪಡೆಯಲಾಯಿತು.

ಇನ್ನು ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಕಿತ್ತೂರು ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆ ತಡವಾಗುತ್ತಿರುವ ಬಗ್ಗೆ ಅವಲೋಕಿಸಲಾಯಿತು. ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು KAIDB ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ನೈರುತ್ಯ ರೈಲ್ವೆ ವಲಯ ಅಭಿಯಂತರರು, KAIDB, NHAI ಅಧಿಕಾರಿಗಳು ಪಾಲ್ಗೊಂಡಿದ್ದರು.

error: Content is protected !!