24/12/2024
IMG-20241101-WA0042

ಬೆಳಗಾವಿ-೦೧: ವೇಣುಗ್ರಾಮ ಎಂದು ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯವಾಗಿದೆ. ಐತಿಹಾಸಿಕವಾಗಿ ಜಿಲ್ಲೆಯ ಹಲಸಿ ಗ್ರಾಮವು ಕದಂಬ ಅರಸರ ರಾಜಧಾನಿಯಾಗಿದ್ದ ಸಂಗತಿಯು ಶಾಸನಗಳು ಮತ್ತು ತಾಮ್ರ ಪತ್ರಗಳ ಆಧಾರದಿಂದ ತಿಳಿದುಬರುತ್ತದೆ. ಮದ್ರಾಸ್, ಮುಂಬೈ ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕದ ಕನಸು ನನಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.

IMG 20241101 WA0014 -

IMG 20241101 WA0044 -
ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಶುಕ್ರವಾರ  ಜರುಗಿದ ೬೯ನೇ ರಾಜ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ನೆವೇರಿಸಿ ಅವರು ಮಾತನಾಡಿದರು.
೬ನೇ ಶತಮಾನದಿಂದ ಕ್ರಿ.ಶ ೭೬೦ರ ವರೆಗೂ ಬೆಳಗಾವಿಯು ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿತ್ತು. ಕ್ರಿ,ಶ ೮೭೫ರ ಅವಧಿಯಲ್ಲಿ ರಾಷ್ಟಕೂಟರ ಆಳ್ವಿಕೆಯಲ್ಲಿ ಸಾಂಸ್ಕöÈತಿಕವಾಗಿ ಬೆಳೆದುಬಂದ ಬೆಳಗಾವಿ, ನಂತರ ರಟ್ಟ ವಂಶದ ಅರಸರ ರಾಜಧಾನಿಯಾಗಿತ್ತು. ಚಾರಿತ್ರಿಕವಾಗಿ ಪಾರತಂತ್ರö್ಯವನ್ನು ವಿರೋಧಿಸಿ ಬ್ರಿಟೀಷರೊಡನೆ ಸ್ವಾತಂತ್ರö್ಯ ಹೋರಾಟಕ್ಕೆ ನಾಂದಿ ಹಾಡಿದ ಕಿತ್ತೂರಿನ ರಾಣಿ ಚೆನ್ನಮ್ಮ; ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಪ್ರಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ಮಲ್ಲಮ್ಮ ನಮ್ಮ ನಾಡಿನ ಧೀಮಂತ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಮೆರವಣಿಗೆ: ೬೯ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ವಿವಿಧ ರೂಪಕ ನಿಮಿತ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ತದನಂತರ ಜರುಗಿದ ಆರ್ಕಷಕ ಮೆರವಣಿಗೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ರೂಪಕಗಳು ಸಾರ್ವಜನಿಕರ ಗಮನ ಸೆಳೆದವು.
ನಾಗರೀಕ ಪೊಲೀಸ್ ಪಡೆ, ಕೆ.ಎಸ್.ಆರ್.ಪಿ ಪುರುಷ ಮತ್ತು ಮಹಿಳಾ ತುಕಡಿ, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಎನ್.ಸಿ.ಸಿ, ಭಾರತ ಸೇವಾದಳ ಮಹೇಶ್ವರಿ ಅಂದ ಮಕ್ಕಳ ಶಾಲೆ ಸೇರಿದಂತೆ ವಿವಿಧ ಶಾಲಾ ಮಕ್ಕಳು ಪರೇಡನಲ್ಲಿ ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ಸಂಸದರಾದ ಜಗದೀಶ ಶೆಟ್ಟರ, ಶಾಸಕರುಗಳಾದ ರಾಜು ಆಸೀಫ್ (ಸೇಠ), ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಚನ್ನರಾಜ ಹಟ್ಟಿಹೊಳಿ, ಸಾಬಣ್ಣ ತಳವಾರ, ಮಹೌಪೌರರಾದ ಸವಿತಾ ಕಾಂಬಳೆ, ಉಪಮಹಾಪೌರ ಆನಂದ ಚವ್ಹಾಣ, ನಗರ ಸೇವಕರು, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ನಗರ ಪೋಲಿಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ನಬ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ ಸಿ.ಇ.ಓ ರಾಹುಲ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಉಪವಿಭಾಗಾಧಿಕಾರಿ ಶ್ರವಣ ನಾಯಕ, ಗಣ್ಯರು, ಸಾರ್ವಜನಿಕರು ಹಾಗೂ ವಿವಿಧ ಶಾಲಾ ಕಾಲೇಜು ವಿಧ್ಯಾರ್ಥಿಗಳು ಹಾಜರಿದ್ದರು.

error: Content is protected !!