ಬೆಳಗಾವಿ-೦೪: – ಬೆಳಗಾವಿಯ ಪರಿಸರ ಕ್ರೀಡಾ ಪಟುಗಳಿಗೆ ಅನುಕೂಲಕರವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಪ್ರತಿಭಾವಂತ ಉದಯೋನ್ಮುಖ ದೇಹದಾರ್ಢ್ಯ ಪಟುಗಳಿದ್ದಾರೆ. ಅವರನ್ನು ಪ್ರೋತ್ಸಾಹಿಸಲು ಬೆಳಗಾವಿ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಷನ್ ಮತ್ತು ಸ್ಪೋರ್ಟ್ಸ್ ಸ್ಥಾಪಿಸಲಾಗಿದೆ.
ಈ ಸಂಸ್ಥೆಯು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮತ್ತು ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್‌ನೊಂದಿಗೆ ಸಂಯೋಜಿತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ ಅಧ್ಯಕ್ಷ ಸುರೇಶ್ ಕದಂ ಈ ಸುದ್ದಗೋಷ್ಠಿ ಅವರು ಮಾಹಿತಿ ನೀಡಿದರು.
ಸುರೇಶ್ ಕದಂ ಮಾತನಾಡಿ, ಇಂಡಿಯನ್ ಬಾಡಿ ಇ ಫೆಡರೇಶನ್ ವತಿಯಿಂದ ರಾಜ್ಯ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ ಹಾಗೂ ಸಂಘದ ವತಿಯಿಂದ ವಿವಿಧ ಹಂತದ ದೇಹದಾರ್ಢ್ಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಬೆಳಗಾವಿಯೂ 2002ರಲ್ಲಿ ಮಿಸ್ಟರ್ ಇಂಡಿಯಾ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಮಧ್ಯಂತರದಲ್ಲಿ, ಸಂಘಟನೆಯಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು.
ಇಂತಹ ಸಂದರ್ಭದಲ್ಲಿ ಬೆಳಗಾವಿಯ ಕ್ರೀಡಾಪಟುಗಳು ಸಂಕಷ್ಟಕ್ಕೆ ಸಿಲುಕಬಾರದು. ಅವರಿಗೆ ಸಾಧ್ಯವಾದಷ್ಟು ಉತ್ತಮ ಸೌಲಭ್ಯಗಳು ಸಿಗಬೇಕು. ಆಟಗಾರರು ವಿವಿಧ ಹಂತದ ಸ್ಪರ್ಧೆಗಳಲ್ಲಿ ಭಾಗವಹಿಸುವಂತಾಗಬೇಕು. ಈ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಬಾಡಿ ಬಿಲ್ಡರ್ ಅಸೋಸಿಯೇಷನ್ ಮತ್ತು ಸ್ಪೋರ್ಟ್ಸ್ ಸ್ಥಾಪಿಸಲಾಗಿದೆ.