ಬೆಳಗಾವಿ-೦೬ : ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಈ ವರ್ಷದ ಕಾರ್ಯಕ್ರಮ ಬೆಳಗಾವಿಯಲ್ಲಿ ಗುರುವಾರ ಉದ್ಘಾಟನೆಯಾಗಲಿದೆ.
ನಾಳೆ ಗುರುವಾರ ಬೆಳಗ್ಗೆ 10 ಗಂಟೆಗೆ ಆನಗೋಳದ ಸಂತಮೀರಾ ಶಾಲೆಯ ಮಾಧವ ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯುವುದು. ರಾಮಕೃಷ್ಣ ಮಿಶನ್ ಆಶ್ರಮದ ಸ್ವಾಮೀ ಮೋಕ್ಷಾತ್ಮಾನಂದ ಮಹಾರಾಜ ಅವರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಎಂದು ಬೆಳಗಾವಿ ಭಗವದ್ಗೀತೆ ಅಭಿಯಾನ ಸಮಿತಿ ವಿನಂತಿಸಿದೆ. ಕಳೆದ ವರ್ಷ ಬೆಳಗಾವಿ ಕೇಂದ್ರಿತವಾಗಿ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನ ನಡೆದಿದ್ದು, ಈವರ್ಷ ವಿಜಯಪುರ ಕೇಂದ್ರತವಾಗಿ ನಡೆಯುತ್ತಿದೆ. ರಾಜ್ಯಾದ್ಯಂತ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.