ಸವದತ್ತಿ-೧೨: ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಯೋಜನೆಯಡಿ ಸುಮಾರು 75 ಲಕ್ಷ ರೂ.ಗಳ ವೆಚ್ಚದಲ್ಲಿ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಶಾಸಕ ವಿಶ್ವಾಸ ವೈದ್ಯ ಸೋಮವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವಾಸ್ ವೈದ್ಯ ಹಾಗೂ ಚನ್ನರಾಜ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಸ್ಥಳೀಯ ಮುಖಂಡರು, ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.