23/12/2024
IMG-20241113-WA0036

ಬೆಳಗಾವಿ-೧೩:ಗ್ರಾಮೀಣ ಪ್ರದೇಶದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ಸ್ವ-ಉದ್ಯೋಗ ಕಲ್ಪಿಸುವ ಬಗ್ಗೆ ತಾಲೂಕಾ ಮಟ್ಟದ ಅಧಿಕಾರಿಗಳು ಹೆಚ್ಚಿನ ಗಮನವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ನ.13) ರಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಪ್ರಗತಿ ಪರಿಶೀಲನಾ ವಿಡಿಯೋ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಬಡವರು ಕಡು ಬಡವರು, ದುರ್ಬಲ ವರ್ಗದ ಕುಟುಂಬಗಳನ್ನು ಗುರ್ತಿಸಿ ಮಹಿಳಾ ಸ್ವ ಸಹಾಯ ಗುಂಪುಗಳನ್ನು ರಚನೆ ಮಾಡಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದು. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ವಿಮೆಗಳನ್ನು ಬಗ್ಗೆ ಜನರಿಗೆ ಮಾಹಿತಿ ನೀಡಿ ವಿಮೆಗಳ ಸದುಪಯೋಗ ಪಡೆದುಕೊಳ್ಳುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ವನ-ಧನ ವಿಕಾಸ ಕೇಂದ್ರ ಯೋಜನೆಯನ್ನು ಸ್ಥಳೀಯವಾಗಿ ಸೀಗುವ ಸಂಪನ್ಮೂಲಗಳ ಅನುಸಾರವಾಗಿ ಉತ್ಪನ್ನಗಳನ್ನು ಹೆಚ್ಚಿಸುವದು. ನಲ ಜಲ ಮಿತ್ರ ಹಾಗೂ ಘನ ತ್ಯಾಜ್ಯ ವಿಲೇವಾರಿಗೆ ಸ್ವ ಸಹಾಯ ಗುಂಪುಗಳ ಮೂಲಕ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ತಿಳಿಸಿದರು. ನಮ್ಮ ಗ್ರಾಮ ನಮ್ಮ ಯೋಜನೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಬಡತನ ನಿರ್ಮೂಲನ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು. ಜಿಪಿಎಲ್ಎಫ್ ನಲ್ಲಿ ಲಭ್ಯವಿರುವ ಸಮುದಾಯ ಬಂಡವಾಳ ನಿಧಿಯನ್ನು ಸ್ವ ಉದ್ಯೋಗ ಮಾಡುವುದಕ್ಕೆ ಸದ್ಬಳಕೆ ಮಾಡುವಂತೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ, ಜಿಲ್ಲೆಯ ಎಲ್ಲ ತಾಲ್ಲೂಕಾ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲ್ಲೂಕಾ ಪಂಚಾಯತಿಯ ಸಹಾಯಕ ನಿರ್ದೇಶಕರು, (ಪಂಚಾಯತ್ ರಾಜ್) ಜಿಲ್ಲಾ ಪಂಚಾಯತ್ ಎನ್ಆರ್ಎಲ್ಎಮ್ ಸಿಬ್ಬಂದಿಗಳು ಮತ್ತು ತಾಲೂಕು ಮಟ್ಟದ ಎನ್ಆರ್ಎಲ್ಎಮ್ ಸಿಬ್ಬಂದಿಗಳು

error: Content is protected !!