23/12/2024
WhatsApp Image 2024-11-13 at 7.54.55 PM
ಬೆಳಗಾವಿ-೧೪: ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ (ರಿ) ರಾಜ್ಯ ಸಮಿತಿ ವತಿಯಿಂದ ರಾಜ್ಯಮಟ್ಟದ ವಾಲ್ಮೀಕಿ ಸೇವಾ ರತ್ನ-2024ರ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾ ವಾಲ್ಮೀಕಿ ಸಮಾಜದ ಮುಖಂಡರಾದ ಭಾವಕಣ್ಣ ಭಾಂಗ್ಯಾಗೊಳ (ನಾಯಕ) ಅವರಿಗೆ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಮೆಜಸ್ಟಿಕ್ ಹತ್ತಿರದ ಗಾಂಧಿಭವನದಲ್ಲಿರುವ ಬಾಪು ಸಭಾಂಗಣದಲ್ಲಿ ಮಂಗಳವಾರ (ನ.12) ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ರಾಜ್ಯ ಮಟ್ಟದ ವಾಲ್ಮೀಕಿ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಳಗಾವಿ ಜಿಲ್ಲೆಯಿಂದ ವಾಲ್ಮೀಕಿ ಸಮಾಜದ ಮುಖಂಡರಾದ
ಭಾವಕಣ್ಣ ಭಾಂಗ್ಯಾಗೊಳ (ನಾಯಕ) ಯಲ್ಲಪ್ಪ ಕೊಳೆಕರ ಅವರಿಗೆ ದೊಡ್ಡಬಳ್ಳಾಪುರ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ನಾಗಶಕ್ತಿ ಶ್ರೀ ವಾಲ್ಮೀಕಿ ಬ್ರಹ್ಮನಾಂದ ಗುರೂಜಿ
ಪ್ರಶಸ್ತಿ ಪ್ರದಾನ ಮಾಡಿದರು.

ಅದೇ ರೀತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ ಸಮಾಜದ ಬಾಂಧವರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತಿರಿದ್ದರು.
*

error: Content is protected !!