ಬೆಳಗಾವಿ-೧೪: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 10 ಅಂಗನವಾಡಿ ಕೇಂದ್ರಗಳ ಕಟ್ಟಡಕ್ಕೆ ಭೂಮಿ ಪೂಜೆ ನೇರವೇರಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿಯಿಂದ ರಾಜ್ಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳಿಗೆ ಕಟ್ಟಡ ಭಾಗ್ಯ ಸಿಗುತ್ತಿದೆ. ಇದಕ್ಕೆ ಕಳೆದ ಬಜೆಟ್ ನಲ್ಲಿ ಒಪ್ಪಿಗೆ ಸಿಕ್ಕಿದೆ.
ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಂಗನವಾಡಿಯ ನೂತನ ಕಟ್ಟಡಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 10.30 ಗಂಟೆಗೆ ಸಿದ್ದನಬಾವಿ, 11ಕ್ಕೆ ಹಾಲಗಿಮರಡಿ, 11.30ಕ್ಕೆ ಕೆಕೆ ಕೊಪ್ಪದಲ್ಲಿ 2, 12ಕ್ಕೆ ನಾಗೇರಹಾಳ, 12.30ಕ್ಕೆ ಬಡಾಲ ಅಂಕಲಗಿ, 5 ಗಂಟೆಗೆ ನಿಲಜಿ, 5.30ಕ್ಕೆ ಮುತಗಾ, 6ಕ್ಕೆ ಮಾವಿನಕಟ್ಟಿ ಹಾಗೂ 6.30ಕ್ಕೆ ಶಗಣಮಟ್ಟಿ ಗ್ರಾಮಗಳಲ್ಲಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಹಿರೇಬಾಗೇವಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಸಹ ಸಚಿವರು ಪೂಜೆ ನೆರವೇರಿಸುವರು.