ರಾಮದುರ್ಗ-೧೮: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ರಾಮದುರ್ಗ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಕುಂದು ಕೊರತೆ ಹಾಗೂ ಸದಸ್ಯರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನೂ ಒದಗಿಸಿದರು.
ಈ ವೇಳೆ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.