23/12/2024
IMG-20241130-WA0001

ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳಗಾವಿ-೩೦: ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವ ಕನ್ನಡವನ್ನು ಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದು ಪೂಜ್ಯ ಶ್ರೀ ಮ.ನಿ.ಪ್ರ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು.

ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಶುಕ್ರವಾರ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜೃಭಂಣೆಯಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿ,ಎಲ್ಲಾ ಭಾಷೆಯನ್ನು ಪ್ರೀತಿಸಿ ಆದರೆ ಕನ್ನಡ ಭಾಷೆ ಉಳಿಸಿ, ಬೆಳೆಸಿ. ಕನ್ನಡ ಭಾಷೆಯಲ್ಲಿ ಅನ್ಯ ಭಾಷೆಗಳು ಹೊಕ್ಕು, ಕನ್ನಡ ನುಂಗಿ ಹಾಕುತ್ತಿವೆ. ಇದರಿಂದ ನಮ್ಮ ಕನ್ನಡ ಸಂಸ್ಕೃತಿ ಬಿಟ್ಟು ಬೇರೆ ಭಾಷೆಗಳ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದೇವೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡದಲ್ಲಿ ಮಾತನಾಡುವ ಪ್ರತಿಜ್ಞೆ ಮಾಡುವ ನಿರ್ಧಾರ ಕೈಗೊಳ್ಳಬೇಕು ಎಂದರು.

ಅನುಷಾ ಕರಿಬಸಯ್ಯ ಹಿರೇಮಠ ಮಾತನಾಡಿ, ಮಕ್ಕಳು ದೇಶದ ಆಸ್ತಿ,ಅವರಿಗೆ ಸಂಸ್ಕಾರ, ಉತ್ತಮ ಶಿಕ್ಷಣ ಕೊಡಿಸುವುದು ಪೋಷಕರ ಜವಾಬ್ದಾರಿಯಾಗಿದೆ ಎಂದರು.

ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗಾಯತ ಮಹಿಳಾ ಸಮಾಜ ಅಧಕ್ಷೆ ಸುನೀತಾ ಪಾಟೀಲ ಸ್ವಾಗತಿಸಿದರು. ಶೋಭಾ ಪಾಟೀಲ, ರಾಜೇಶ್ವರಿ ಹಿರೇಮಠ, ಸಾಹಿತಿ ಯ. ರು . ಪಾಟೀಲ, ಸಂಸ್ಥಾಪಕಿ ಶೈಲಜಾ ಭಿಂಗೆ, ಜಯಶೀಲಾ ಬ್ಯಾಕೋಡ್‌ , ಶೈಲಾ ಪಾಟೀಲ, ಜ್ಯೋತಿ ಬದಾಮಿ, ಸುರೇಖಾ ಮಾನ್ವಿ, ಹಾಗೂ ಇತರರು ಇದ್ದರು. ಶಾರದಾ ಪಾಟೀಲ ಹಾಗೂ ಅನುಪಮಾ ನಿರೂಪಿಸಿದರು. ಸಹ ಕಾರ್ಯದರ್ಶಿ ವಿದ್ಯಾ ಗೌಡರ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!