23/12/2024
IMG-20241201-WA0000

ಬೆಳಗಾವಿ-೦೧:ಭಾನುವಾರ(ಇಂದು)ಡಿಸೆಂಬರ್ 1 ವಕ್ಫ್ ಬೋರ್ಡ್‌ ವಿರುದ್ಧದ ಭೂಮಿ ಕಬಳಿಕೆ ಆರೋಪಗಳನ್ನು ಖಂಡಿಸಿ, ಬೆಳಗಾವಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ ನಡೆಯಿತು. ‘ವಕ್ಫ್ ಹಠಾವೋ, ದೇಶ ಬಚಾವೋ’ ಎಂಬ ಘೋಷಣೆಯೊಂದಿಗೆ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮುಖ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.

ಪ್ರತಿಭಟನೆಯು ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಆರಂಭಗೊಂಡಿತು. ಅದನಂತರ ಗಣೇಶ್ ಮಂದಿರದಲ್ಲಿ ಪೂಜೆ ನೆರವೇರಿಸಲಾಯಿತು. ಅಲ್ಲಿಂದ ಮಹಾತ್ಮ ಗಾಂಧಿ ಭವನದವರೆಗೆ ಪಾದಯಾತ್ರೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ವಕ್ಫ್ ಬೋರ್ಡ್‌ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರೈತರ ಭೂಮಿಗಳನ್ನು ಕಬಳಿಸುತ್ತಿದೆ. ಇದು ರೈತರ ಹಕ್ಕುಗಳಿಗೆ ಧಕ್ಕೆ ತರುತ್ತಿದೆ. ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಪ್ರಮುಖ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ವಕ್ಫ್ ಬೋರ್ಡ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯು ಶಾಂತಿಯುತವಾಗಿ ನಡೆಯಿತು. ಸರ್ಕಾರವು ವಕ್ಫ್ ಬೋರ್ಡ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಪ್ರಭಾವಿತ ಜನರಿಗೆ ನ್ಯಾಯ ಒದಗಿಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಉದ್ದೇಶವಾಗಿತ್ತು.

ಈ ಸಂದರ್ಭದಲ್ಲಿ ಅನೇಕ ಹಿರಿಯ ನಾಯಕರು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *

error: Content is protected !!