23/12/2024
ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ 12ನೇ ವಾರ್ಷಿಕ ಘಟಿಕೋತ್ಸವ-2024 (1)

ಮೂವರಿಗೆ ಗೌರವ ಡಾಕ್ಟರೇಟ್, ೧೧ ವಿದ್ಯಾರ್ಥಿಗಳಿಗೆ ಚಿನ್ನದ ಪದಕ:ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್

ಬೆಳಗಾವಿ-೦೨: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೨ನೇ ವಾರ್ಷಿಕ ಘಟಿಕೋತ್ಸವ ಸೋಮವಾರ (ಡಿ.೩) ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ “ಜ್ಞಾನ ಸಂಗಮ” ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಅವರು ತಿಳಿಸಿದರು.
ಶ್ರೀನಗರದ ಮಾಳಮಾರುತಿ ಬಡಾವಣೆಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ  ನಡೆದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ೧೨ನೇ ವಾರ್ಷಿಕ ಘಟಿಕೋತ್ಸವ-೨೦೨೪ ರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.
೪ ವಿಷಯಗಳಲ್ಲಿ ಪಿ.ಜಿ. ಡಿಪ್ಲೋಮಾ ಕೋರ್ಸ್ಗಳು, ೪೫೨ ಕ್ಕಿಂತ ಹೆಚ್ಚು ಸಂಶೋಧನಾರ್ಥಿಗಳಿಂದ ಹಲವಾರು ವಿಷಯಗಳಲ್ಲಿ ಪಿಎಚ್.ಡಿ ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿವೆ. ಯುಜಿಸಿಯಿಂದ ೨ಎಫ್ ಹಾಗೂ ೧೨ಬಿ ಮನ್ನಣೆಯನ್ನು ೨೦೨೧ರಲ್ಲಿ ಃ* ನ್ಯಾಕ್ ಮಾನ್ಯತೆಯನ್ನು ವಿಶ್ವ ವಿದ್ಯಾಲಯ ಪಡೆದುಕೊಂಡಿದೆ ಎಂದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೨ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ವಹಿಸಲಿದ್ದಾರೆ. ಸಮಕುಲಾಧಿಪತಿಗಳು ಹಾಗೂ ಉನ್ನತ ಶಿಕ್ಷಣ, ಸಚಿವರಾದ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುವರು ಎಂದು ಹೇಳಿದರು.
ವಿಶ್ವಸಂಸ್ಥೆಯ ಸಲಹೆಗಾರರು, ಅಂತರರಾಷ್ಟ್ರೀಯ ಪ್ರಖ್ಯಾತ ವಿಜ್ಞಾನಿ, ಯು.ಎನ್ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಮಾಜಿ ಹಿರಿಯ ಅಧಿಕಾರಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಅವರು ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ.
ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್. ಬಾಲೇಶ್ ಭಜಂತ್ರಿ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ ದೇವೇಂದ್ರ ಜಿನಗೌಡ ಹಾಗೂ ನಾಗರಿಕ, ಕ್ರೀಡೆ, ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ ಬಿ. ಹೊಸೂರ ಇವರುಗಳಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು.
ಸದರಿ ಘಟಿಕೋತ್ಸವದಲ್ಲಿ ಒಟ್ಟು ೩೮,೫೧೨ ವಿದ್ಯಾರ್ಥಿಗಳು ಪದವಿ ಮತ್ತು ೫೯೦೯ ಸ್ನಾತಕೋತ್ತರ ಪದವಿಯನ್ನು ಮಡೆದುಕೊಂಡಿರುತ್ತಾರೆ. ಇದರಲ್ಲಿ ೧೧ ಸುವರ್ಣ ಪದಕಗಳು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. ೧೨೩ ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಅವರು ತಿಳಿಸಿದರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವ ಪ್ರೊ. ರವೀಂದ್ರ ಎನ್. ಕದಮ್, ಹಣಕಾಸು ಅಧಿಕಾರಿ ಎಂ.ಎ ಸ್ವಪ್ನ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!