ಬೆಳಗಾವಿ-೦೨: ಜಿಲ್ಲೆಯನ್ನು ಹೆಚ್.ಐ.ವಿ ಹಾಗೂ ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಹೆಚ್‌ಐವಿ, ಏಡ್ಸ್ ಸೋಂಕಿತರಾಗಿರುವರಿಗೆ ಬೆಂಬಲ ನೀಡುವುದರ ಮೂಲಕ ಅವರು ಅನುಭವಿಸುತ್ತಿರುವ ಕಳಂಕ ತಾರತಮ್ಯವನ್ನು ಕಡಿಮೆ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕರು ಡಾ.ವಿ.ವಿ.ಶಿಂಧೆ ಹೇಳಿದರು.
ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತು ್ತಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಸಾಮಾನ್ಯ ಶುಶ್ರೂಷಾ ತರಬೇತಿ ಶಾಲೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ಸ್ವಯಂ ಪದವಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಣಿ ಚನ್ನಮ್ಮಾ ವಿಶ್ವ ವಿದ್ಯಾಲಯ, ರೆಡ್ ರಿಬ್ಬನ್ ಕ್ಲಬ್ ಮತ್ತು ವಿವಿಧ ಸ್ವಯಂ ಸೇವಾ ಸಂಘ-ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಅಡಿಟೋರಿಯಂ ಬಿಮ್ಸ್ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನ–೨೦೨೪ ಅಂಗವಾಗಿ ಹಮ್ಮಿಕೊಂಡಿದ ಜಿಲ್ಲಾ ಮಟ್ಟದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಮ್ಸ್ ಆಸ್ಪತ್ರೆನ ಆರ್.ಎಮ್.ಓ. ಡಾ.ಸರೋಜ ತಿಗಡಿ ಅವರು ಮಾತನಾಡಿ, ಈ ವರ್ಷದ ಘೋಷ ವಾಕ್ಯ ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ ನನ್ನ ಆರೋಗ್ಯ ನನ್ನ ಹಕ್ಕು ಎಂಬುದಾಗಿದ್ದು, ಹೆಚ್.ಐ.ವಿ/ಏಡ್ಸ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ಎದುರಿಸಲು ಮಾನವ ಹಕ್ಕುಗಳನ್ನು ಎತ್ತಿ ಹಿಡಿಯುವ ಪ್ರಾಮುಖ್ಯತೆಯನ್ನು ಈ ಘೋಷಾ ವಾಕ್ಯ ಒತ್ತಿ ಹೇಳುತ್ತದೆ. ಇದು ಜನರ ಹಕ್ಕುಗಳನ್ನು ಉಲ್ಲಂಘಿಸುವ ಕಾನೂನು ಮತ್ತು ಸಾಮಾಜಿಕ ಅಡೆತಡೆಗಳನ್ನು ತೆಗೆದು ಹಾಕಲು ಪ್ರತಿಪಾದಿಸುತ್ತದೆ ಎಂದು ತಿಳಿಸಿದರು.
ಡಾ:ವಿವೇಕ ಹೊನ್ನಳಿ ಪ್ರಭಾರಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸವಲತ್ತುಗಳ ದೊರಕುತ್ತಿರುವ ಬಗ್ಗೆ ತಿಳಿಸಿದರು. ಪ್ರೌಢಶಾಲೆಯ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಹದಿಹರೆಯದ ಆರೋಗ್ಯ ಶಿಕ್ಷಣ, ಇತರೆ ಇಲಾಖೆಗಳಿಗೆ ಮುಖ್ಯವಾಹಿನಿ ಮುಖಾಂತರ ತರಬೇತಿ, ಸಮುದಾಯ ಆಧಾರಿತ ಶಿಬಿರಗಳ ಆಯೋಜನೆ ಮಾಡಲಾಗುತ್ತಿದ್ದು, ಜಿಲ್ಲಾ ಪಂಚಾಯತ ವತಿಯಿಂದ ಪ್ರತಿ ತಿಂಗಳು ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳ ಆಯೋಜನೆ ಮಾಡಲಾಗುತ್ತಿದೆ ಎಂದರು.
ಹೆಚ್.ಐ.ವಿ/ಏಡ್ಸ್ ನಿಯಂತ್ರಣ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹೆಚ್.ಐ.ವಿ/ಏಡ್ಸ್ ಕುರಿತ ಆಯ್.ಇ.ಸಿ. ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಮ್ಸ್ನ ನೋಡಲ್ ಅಧಿಕಾರಿಗಳಾದ ಡಾ.ಪ್ರಶಾಂತ, ಆರ್.ಎಲ್.ಎಸ್. ಕಾಲೇಜಿನ ಡಾ.ಮಹಾದೇವಿ ಉಪಸ್ಥಿತರಿದ್ದರು.
ಜಾಥಾ ಕಾರ್ಯಕ್ರಮ: ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾದ ಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊನಕೇರಿ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಲನೆ ನೀಡಿದರು. ಜಾಗೃತಿ ಜಾಥಾವು ಚನ್ನಮ್ಮಾ ವೃತ್ತ, ಡಾ.ಬಿ.ಆರ್.ಅಂಬೇಡ್ಕರ ಮಾರ್ಗವಾಗಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಅಡಿಟೋರಿಯಂ ಸಭಾಂಗಣದವರೆಗೆ ಸಾಗಿತು.
ಜಾಥಾದಲ್ಲಿ ಬಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕರು ಡಾ.ವಿ.ವಿ.ಶಿಂಧೆ, ಪ್ರಭಾರಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಡಾ.ವಿವೇಕ ಹೊನ್ನಳಿ, ವೈದ್ಯಾಧಿಕಾರಿಗಳು ಡಾ.ಬಿ.ಎನ್ ತುಕ್ಕಾರ, ಕಾಲೇಜ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಆಶಾ ಕಾರ್ಯಕರ್ತೆಯರು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಿಬ್ಬಂದಿ, ಎನ್.ಸಿ.ಸಿ. ಕೆಡಿಟ್ಸ್, ಎನ್.ಎಸ್.ಎಸ್. ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ತಾಂತ್ರಿಕ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗಿಯಾಗಿದರು.