ಬೆಳಗಾವಿ-14: ನಗರದ ಕೆ.ಎಲ್.ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೆಎನ್‌ಎಂಸಿ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಡಾ.ಕಿಶೋರ್ ಬಂಡಗಾರ ಸ್ವಾಮಿ ವಿವೇಕಾನಂದರ ಜೀವನ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ರಾಷ್ಟ್ರೀಯ ಮನೋಭಾವನೆಯನ್ನು ಹೊಂದಿ, ವಿವೇಕಾನಂದರ ತತ್ವಾದರ್ಶಗಳನ್ನು ದಿನ ನಿತ್ಯದ ಜೀವನದಲ್ಲಿ ಪಾಲಿಸುವಂತೆ ಸಲಹೆ ನೀಡಿದರು. ಸಾಮಾಜಿಕ ಕಾರ್ಯಕರ್ತ ಕಿಶೋರ್ ಕಾಕಡೆ ಭಾಗವಹಿಸಿ ಭಾರತೀಯ ಸಮಾಜದ ಮೌಲ್ಯಗಳು ಮತ್ತು ಸಂಪ್ರದಾಯಗಳ ಕುರಿತು ಮಾತನಾಡಿದರು.
ಕಾಲೇಜಿನ ಸಾಂಸ್ಕೃತಿಕ ಮತ್ತು ಎನ್ ಎಸ್.ಎಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಹಾಸ ಹುದ್ದಾರ್ ಸ್ವಾಗತಿಸಿ, ಪ್ರಜ್ವಲ್ ತಾಪ್ಸಿ ವಂದಿಸಿ, ಸಹನಾ ವಾಲಿ ಹಾಗೂ ಫಣಿ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. ವಿಭಾಗದ ಮುಖ್ಯಸ್ಥರಾದ ಪ್ರೊ. ಶಿಲ್ಪಾ ರಾಯ್ಕರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು