ಬೆಳಗಾವಿ-೦೩:ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರುಶಾಸಕ ಆಸೀಫ್ (ರಾಜು) ಸೇಠ್ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಬೆಳಗಾವಿ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಎನಾಗುತ್ತದೆ ಎಂದು ಕಾಯ್ದು ನೊಡೋಣ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯದರು ನಮ್ಮ ಭಾಗದಲ್ಲಿ ಯಾರು ಸಚಿವರಾಗಿಲ್ಲ. ಹೀಗಾಗಿ ಶಾಸಕ ಆಸೀಫ್ (ರಾಜು) ಸೇಠ್ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದಾರೆ ಅಷ್ಟೇ, ಆದರೆ ಸಚಿವರನ್ನ ಕೈ ಬಿಡುವುದು ಆಗಲಿ ಅಥವಾ ನೇಮಕ ಮಾಡಿಕೊಳ್ಳುವ ಅಧಿಕಾರ, ವ್ಯಾಪ್ತಿ ನನಗೆ ಬರಲ್ಲ. ಈ ಕುರಿತು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ ಅವರನ್ನೇ ಕೇಳಿ ಎಂದು ಮಾಧ್ಯಮದರ ಪ್ರಶ್ನೆ ಪ್ರತಿಕ್ರಿಯಿಸಿದರು.
ಬೆಳಗಾವಿ ಎರಡನೇ ರಾಜ್ಯಧಾನಿ ಆಗುವ ಸಮಯ ಬರುತ್ತದೆ. ಆದರೆ ಆ ಸಮಯ ಬರುವವರೆಗೆ ಕಾಯಬೇಕು. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳತ್ತದೆ. ನನ್ನ ಹೆಸರು ಪ್ರಸ್ತಾಪವಾಗಿಲ್ಲ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಯೇ ಆಗಿಲ್ಲ. ತಳ ಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ಪೂರ್ಣಾವಧಿ ಅಧ್ಯಕ್ಷರ ಅವಶ್ಯಕತೆ ಇದೆ. ಹೀಗಾಗಿ ಮತ ಸೆಳೆಯುವರನ್ನು, ಜನರನ್ನು ಆಕರ್ಷಣೆ ಮಾಡುವವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು.
1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಭಾಗವಹಿಸಿ ಈಗ 100 ವರ್ಷಗಳು ತುಂಬುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಿದ್ದತಾ ಸಭೆಯನ್ನು ಮಾಡಿದ್ದೇವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಇರುವದರಿಂದ ಅಲ್ಲೆ ಸಭೆ ಮಾಡಿದ್ದೇವೆ. ಈ ವಿಷಯ ಕುರಿತು ಮೂರು ದಿನಗಳ ನಂತರ ಡಿ.ಸಿ.ಎಂ ಡಿ.ಕೆ. ಶಿವಕುಮಾರ ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚಿಸುತ್ತೇನೆ: ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರಿಗೆ ಸೂಚಿಸುತ್ತೇನೆ. ನಿಮ್ಮ ಗಮನಕ್ಕೆ ಬಂದ ಸಮಸ್ಯೆಗಳನ್ನು ಅವರಿಗೆ ತಿಳಿಸಿ, ಸರಿ ಪಡಿಸುವ ಕಾರ್ಯವನ್ನು ಪೊಲೀಸ್ ಕಮಿಷನರ್ ಅವರು ಮಾಡುತ್ತಾರೆಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಹಾಸನ ಕಾರ್ಯಕ್ರಮ ಬಗ್ಗೆ ಅಲ್ಲಿನ ಉಸ್ತುವಾರಿ ಸಚಿವರು ನೋಡಿಕೊಳ್ಳುತ್ತಿದ್ದು, ಪಕ್ಷಕ್ಕಾಗಿ ದುಡಿದ ಸುಮಾರು ಕಾರ್ಯಕರ್ತರಿದ್ದು, ಸಾವಿರ ಕಾರ್ಯಕರ್ತರಿಗೆ ಬೆಳಗಾವಿ ಅಧಿವೇಶನ ಮುಗಿದ ನಂತರ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಗೂ ಮುನ್ನ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹಿಳೆಯರ, ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಹವಾಲು ಆಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ರಾಜಾ ಸಲೀಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತಿರಿದ್ದರು.