ಬೆಳಗಾವಿ-೧೦: ವಿಧಾನಮಂಡಳದ ಚಳಿಗಾಲದ ಅಧಿವೇಶದ ವೇಳೆ, ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಬೃಹತ್ ಟ್ರ್ಯಾಕ್ಟರ್ ರ‌್ಯಾಲಿಯಲ್ಲಿ ಸಾವಿರಾರು ಕಾರ್ಯಕರ್ತರ ಮೂಲಕ ಆಗಮಿಸಿ ಬಸವ ಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಸೇರಿದಂತೆ ಕೆಲಸ ಬಿಜೆಪಿ ನಾಯಕರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಕ್ಕೆ ಪ್ರಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಂತೆ, ಪ್ರತಿಭಟನೆ ಹಿಂಸಾಚಾರದ ಸ್ವರೂಪವನ್ನು ಪಡೆದುಕೊಂಡಿತ್ತು.
2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಪ್ರತಿಭಟನಾಕಾರರ ಗುಂಪು ಯತ್ನಿಸತ್ತು. ಆ ವೇಳೆ 2 ಸಾವಿರ ಕಿಂತ ಹೆಚ್ಚು ಪೊಲೀಸರು ಸೇರಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿರುವ ವೇಳೆ ಪ್ರತಿಭಟನಾಕಾರರು, ಪ್ರತಿಭಟನೆಯನ್ನು ಮತ್ತಷ್ಟು ಉಗ್ರ ಸ್ವರೂಪಕ್ಕೆ ತೆಗೆದುಕೊಂಡಿರುವುದರಿಂದ ಕೆಲ ಗಂಟೆಗಳ ಪ್ರತಿಭಟನಾ ಸ್ಥಳದಲ್ಲಿ ಉಘ್ವಿದ್ನ ರೂಪ ಪಡೆದುಕೊಂಡು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಂತೆ ಹೋರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಮತ್ತೊಂದೆಡೆ ಪ್ರತಿಭಟನಾಕಾರರ ಆಕ್ರೋಶ ಇನ್ನಷ್ಟು ಹೆಚ್ಚಿದೆ. ಪರಿಷತ್ ಸದಸ್ಯರ, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ವಾಹನಗಳ ಗಾಜುಗಳು ಪುಡಿ ಪುಡಿಯಾಗಿವೆ.
ಬಿಜೆಪಿಯಿಂದ ಹೋರಾಟ ಹೈಜಾಕ್ ಆರೋಪ
ಪಂಚಮಸಾಲಿ ಹೋರಾಟವನ್ನು ಬಿಜೆಪಿ ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಸುವರ್ಣ ಸೌಧದಲ್ಲಿ ಮಾತನಾಡಿ, ಸ್ವಾಮೀಜಿ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸ್ಥಳಕ್ಕೆ ಕಳಿಸಿದ್ದಾರೆ. ಆದರೆ ಸ್ವಾಮೀಜಿ ಮಾತುಕತೆಗೆ ನಿರಾಕರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಹೋರಾಟ ಬಿಜೆಪಿಗೆ ಸೀಮಿತವಾಗುತ್ತಿದೆ. ಪಕ್ಷಾತೀಯವಾಗಿ ಹೋರಾಟ ನಡೆಯುತ್ತಿಲ್ಲ. ಬಿಜೆಪಿ ನಾಯಕರು ಅಲ್ಲಿ ಹೋಗಿ ಕುಳಿತುಕೊಂಡಿದ್ದಾರೆ. ಈ ಮೂಲಕ ಪ್ರಚೋದನೆ ಮಾಡುತ್ತಿದ್ದಾರೆ. ಈ ರೀತಿಯಲ್ಲಿ ಪ್ರಚೋದನೆ ಸರಿಯಲ್ಲ ಎಂದರು.
ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ.!
ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಗೆ ಟ್ರಾಕ್ಟರ್ ರ್ಯಾಲಿ ಮೂಲಕ ಪ್ರತಿಭಟನೆಗೆ ಸ್ವಾಮೀಜಿ ಕರೆ ಕೊಟ್ಟಿದ್ದರು. ಆದರೆ ಸರ್ಕಾರ ಇದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಹೀಗಿದ್ದರೂ ಪಂಚಮಸಾಲಿ ಲಿಂಗಾಯತ ಸಮುದಾಯ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರು ಸುವರ್ಣ ಸೌಧದತ್ತ ಬಂದಾಗ ರಸ್ತೆ ಮಧ್ಯೆ ಪೊಲೀಸರು ತಡೆದರು.
ಒಟ್ಟಾರೆಯಾಗಿ 2ಎ ಮೀಸಲಾತಿ ವಿಚಾರವಾಗಿ ನಡೆಸಿದ ಪಂಚಮಸಾಲಿ ಹೋರಾಟವು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿರುವುದರಿಂದ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿಗಳ ಆಸೆಗಾಗಿ ನಿಮ್ಮ ವೋಟ್ ಹಾಕಿ ನಿಮ್ಮನ್ನು ಅಧಿಕಾರಕ್ಕೆ ತಂದಿದಕ್ಕೆ ದೊಡ್ಡ ಬಹುಮಾನವನ್ನು ಕೊಟ್ಟಿದ್ದೀರಾ ಸರ್ಕಾರ ಬಳಿ ಪಂಚಮಸಾಲಿ ಬೇಡಿಕೆಯನ್ನು ಕೇಳುವುದಕ್ಕೆ ಬಂದರೆ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡಿಸಿದೀರಲ್ಲಾ ಮುಂದಿನ ದಿನಗಳ ಕಾಂಗ್ರೆಸ್ ಗೆ ತಕ್ಕ ಪಾಠ ಕಳಿಸುವುದಾಗಿ ಎಚ್ಚರಿಕೆ ನೀಡಿದ ಹೋರಾಟಗಾರರು.