ಬೆಳಗಾವಿ-೧೦:ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಛೇರಿ “ಕಾಂಗ್ರೆಸ್ ಭವನ”ದಲ್ಲಿ ಮಾಜಿ ರಾಜ್ಯಪಾಲರು, ಮಾಜಿ ಮುಖ್ಯಮಂತ್ರಿ, ಹಾಗೂ ಮಾಜಿ ಕೇಂದ್ರ ಸಚಿವರಾದ್ ಎಸ್ ಎಂ ಕೃಷ್ಣ ಅವರಿಗೆ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಅಧ್ಯಕ್ಷರಾದ ವಿನಯ್ ನಾವಲಗಟ್ಟಿ ಅವರು ಸಂತಾಪ ಸೂಚಿಸಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹನ್ಮಣ್ಣವರ, ದಯಾನಂದ್ ಪಾಟೀಲ್, ಕರ್ನಾಟಕ ಬಾಲ ವಿಕಾಸ ಆಕಾಡೆಮಿ ರಾಜ್ಯಾಧ್ಯಕ್ಷ ಸಂಗಮೇಶ ಬಬಲೇಶ್ವರ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ಶ್ರೀಮತಿ ಕಾಂತಾ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ ಜೆ, ಜಿಲ್ಲಾ ಎಸ್ ಸಿ ಘಟಕದ ಅಧ್ಯಕ್ಷ ಅನಂತಕುಮಾರ್ ಬ್ಯಾಕುಡ್, ಸುಭಾಸ್ ಪೂಜಾರಿ, ಶೇಖರ್ ಇಟಿ, ಶಕೀಲ ಮುಲ್ಲಾ, ಮನ್ಸೂರ್ ಅತ್ತಾರ, ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.