ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್‍ದ ಮೂಲಕ ಕಳೆದ 15 ವರ್ಷದಿಂದ ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ನೇತ್ರ ಚರ್ಮ ದೇಹದಾನ ಹಾಗೂ ಅಂಗಾಂಗ ದಾನದ ಜಾಗೃತಿ ಮೂಡಿಸಿ ಕರ್ನಾಟಕದಲ್ಲಿ ಟ್ರಸ್ಟಿನ ಮುಖಾಂತರ ಹೆಚ್ಚಿನ ಸಂಖ್ಯೆಯಲ್ಲಿ ದೇಹದಾನ ಅಂಗಾಂಗ ದಾನ ಡಾ. ಮಹಾಂತೇಶ ರಾಮಣ್ಣನವರ ಹೆಚ್ಚಿನ ಶ್ರಮ ವಹಿಸಿದ್ದಾರೆ. ಇತ್ತೀಚಿಗಷ್ಟೇ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟಿಗೆ ಅತ್ಯುತ್ತಮ ಚಾರಿಟೇಬಲ್ ಟ್ರಸ್ಟ್ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಮಾನ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.