ಬೆಳಗಾವಿ ಗಡಿಭಾಗದಲ್ಲಿ ಕನ್ನಡ ಶಾಲೆಗಳ ಕಗ್ಗೊಲೆ ಆಗುತ್ತಿದ್ದು ಕನ್ನಡ ವಿದ್ಯಾಭ್ಯಾಸ ಮಾಡುವ ಮಕ್ಕಳ ಭವಿಷ್ಯವನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಕನ್ನಡ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಪ್ರಸ್ತುತ ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ . ಇಂತಹ ಸಂದರ್ಭದಲ್ಲಿ ಖಾನಾಪುರ ತಾಲೂಕಿನಲ್ಲಿ ಬರುವ ಸುತ್ತಮುತ್ತ ಹಳ್ಳಿಗಳಲ್ಲಿ ಕನ್ನಡ ಶಾಲೆಗಳೇ ಇಲ್ಲದೆ ಮಕ್ಕಳ ಶಿಕ್ಷಣದ ಭವಿಷ್ಯಕ್ಕೆ ಕೊಳ್ಳಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ . ಮರಾಠಿ ಶಾಲೆಗಳಿಗೆ ಹೆಚ್ಚಿನ ಒತ್ತು ಕೊಟ್ಟು ಕನ್ನಡ ಶಾಲೆಯ ಮಕ್ಕಳು ವಿದ್ಯಾಭ್ಯಾಸಕ್ಕೆ ಒತ್ತಯವಾಗಿ ಅನಿವಾರ್ಯವಾಗಿ ಮರಾಠಿ ಶಾಲೆಗಳಿಗೆ ಸೇರುವಂತಾಗಿದೆ ಇದರಿಂದಾಗಿ ಮಕ್ಕಳು ಶಾಲೆಗೆ ಹೋಗದೆ ಅನಕ್ಷರಸ್ಥರು ಆಗುತ್ತಿದ್ದಾರೆ. ಕೆಲವು ಮಕ್ಕಳು ಶಾಲೆಗೆ ಹೋಗಲು ಸರಿ ಸುಮಾರು 15km ರಿಂದ 25km ವರೆಗೆ ಸಂಚಾರ ಮಾಡಬೇಕಾಗಿದೆ ಸರಿಯಾದ ರಸ್ತೆ ಸಂಪರ್ಕವೂ ಇಲ್ಲದೆ ಮತ್ತೆ ತುಂಬಾ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ವಿಷಯವಾಗಿ ಹಲವು ಬಾರಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖಾಂತರ ಹಾಗೂ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು ಸಂಬಂಧ ಪಟ್ಟ ಶಿಕ್ಷಣ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಬೇಜವಾಬ್ದಾರಿ ವಹಿಸಿ ಮೌನವಹಿಸುತ್ತಿರುವುದು ಖಂಡನೀಯ. ಅದಕ್ಕಾಗಿ ಬೆಳಗಾವಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರಿಗೆ ಮತ್ತು ಆಪ್ತ ಸಹಾಯಕರಾದ ಜಯಪ್ರಕಾಶ ರವರಿಗೆ ಬೇಟಿ ಮಾಡಿ ಸಮಸ್ಯೆಗಳನ್ನು ತಿಳಿಸಲಾಯಿತು. ಸಚಿವರು ಹಾಗೂ ಆಪ್ತರು ತಕ್ಷಣವೇ ಮನವಿಗೆ ಸ್ಪಂದಿಸಿ ಆದಷ್ಟು ಬೇಗ ಶಾಲೆ ನಿರ್ಮಾಣ ಮಾಡುವ ಭರವಸೆ ನೀಡಿದ್ದಾರೆ.