ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ರಾಜ್ಯದಲ್ಲಿ ತನ್ನದೇ ಆದ ಸದ್ದನ್ನು ಮಾಡುತ್ತಿದ್ದು, ಲಕ್ಷಾಂತರ ಕೆಲಸ ಕಾರ್ಯಗಳಿಗೆ ಗೃಹಲಕ್ಷ್ಮಿಯ ಹಣ ವರದಾನವಾಗಿದೆ.
ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2,000/- ರೂ, ಹಣ ಕೂಡಿಟ್ಟು ಗದಗ ಜಿಲ್ಲೆಯ ಗಜೇಂದ್ರಗಡ್ ಪಟ್ಟಣದ ಮಾಲದಾರ ಓಣಿಯ ಅತ್ತೆ ಹಾಗೂ ಸೊಸೆ ಬೊರವೆಲ್ ಹಾಕಿಸಿದ್ದು, ಬೊರವೆಲ್ ನಿಂದ ಒಳ್ಳೆಯ ನೀರನ್ನು ಪಡೆದಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೊರವೆಲ್ ಹಾಕಿಸಲು ಒಟ್ಟು 60 ಸಾವಿರ ರೂ,ಗಳು ಖರ್ಚಾಗಿದ್ದು, ಗೃಹಲಕ್ಷ್ಮಿ ಯೋಜನೆಯ 44 ಸಾವಿರ ಬಳಕೆ ಮಾಡಲಾಗಿದೆ, ಇನ್ನುಳಿದ ಹಣ ಮಗ ನೀಡಿರುವುದಾಗಿ ತಿಳಿದು ಬಂದಿದೆ.
– *ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳಕರ್*
*ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು.*