ಬೆಳಗಾವಿ-೧೫:ರಾಜ್ಯದಲ್ಲಿ ತಾಯಿ ಹಾಗೂ ಶಿಶುಗಳ ಮರಣದ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ
ಈ ಎಲ್ಲ ವಿಚಾರಗಳನ್ನ ಖಂಡಿಸಿ ಸರ್ಕಾರದ ವಿರುದ್ಧ ಸೋಮವಾರ ಡಿಸೆಂಬರ್ 16ರಂದು ಪ್ರತಿಭಟನೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 75 ಬಾಣಂತಿಯರು ಹಾಗೂ 322 ನವಜಾತ ಶಿಶುಗಳು ಸಾವನ್ನಪ್ಪಿವೆ ರಾಜ್ಯದಲ್ಲಿ ಬಾಣಂತಿ ಹಾಗೂ ಶಿಶುಗಳ ನಿಗೂಢ ಮರಣ ಹೆಚ್ಚಾಗುತ್ತಿದೆ ಎಂಬುದಕ್ಕೆ ಬೆಳಗಾವಿ ಹಾಗೂ ಬಳ್ಳಾರಿಯಲ್ಲಿ ನಡೆದ ಘಟನೆಗಳು ಸಾಕ್ಷಿಯಾಗಿವೆ
ಈ ಸರ್ಕಾರದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಸರ್ಕಾರದ ಶಕ್ತಿ ಯೋಜನೆಯಿಂದ ಹಲವೆಡೆ ಸಾವು ನೋವುಗಳು ಸಂಭವಿಸಿವೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಶೋಭಾ ನಿಸಿಮಗೌಡರ ಶನಿವಾರ ಹೇಳಿದರು.
ನಂತರ ಭಾ.ಜ.ಪಾ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಇದೇ ಸೋಮವಾರ 16-12-2024 ರಂದು ನಗರದ ಮಾಲಿನಿ ಸಿಟಿಯಲ್ಲಿ ಭಾ.ಜ.ಪಾ ಮಹಿಳಾ ಮೋರ್ಚಾ ವತಿಯಿಂದ ನಡೆಯಲಿರುವ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾ.ಜ.ಪಾ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕರಾದ B.Y ವಿಜಯೇಂದ್ರ, ರಾಜ್ಯ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚೆಲುವಾದಿ ನಾರಾಯಣಸ್ವಾಮಿ, ಶಾಸಕರು,ವಿಧಾನ ಪರಿಷತ್ ಸದಸ್ಯರು, ಭಾರತೀಯ ಜನತಾ ಪಕ್ಷದ ರಾಜ್ಯದ ಪ್ರಮುಖ ಮುಖಂಡರು ಪದಾಧಿಕಾರಿಗಳು ಹಾಗೂ ವಿವಿಧ ಜಿಲ್ಲೆಗಳ ಮಹಿಳಾ ಮೋರ್ಚಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಾಂಭವಿ ಅಶ್ವತಪೂರ, ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಉಜ್ವಲಾ ಬಡವನಾಚೆ, ಮಹಿಳಾ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷೆ ನಯನಾ ಬಸ್ಮೆ, ಮಹಾನಗರ ಜಿಲ್ಲಾಧ್ಯಕ್ಷರಾದ ಶಿಲ್ಪಾ ಕೆಕರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾದಮ್ಮನವರ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ಅನುರಾಧಾ ಬೆಟಗೇರಿ, ಶಕುಂತಲಾ ದೊಡವೋಣಿ ಹಾಗೂ ಪ್ರಮುಖ ಪದಾಧಿಕಾರಿಗಳು ಹಾಜರಿದ್ದರು.