23/12/2024
IMG-20241215-WA0003

ಬೆಳಗಾವಿ-೧೫:”ಪಂಚಮಸಾಲಿ‌ ಹೋರಾಟಗಾರರ ಮೇಲಿನ‌ ಮಾರಣಾಂತಿಕ ಹಲ್ಲೆ ಮತ್ತು ಮುಖ್ಯಮಂತ್ರಿ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಡಿ.16ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಬೆಳಗಾವಿ ಡಿ ಸಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಮಾಡುತ್ತೇನೆ. ಪ್ರತಿದಿನವೂ ಒಂದೊಂದು ಜಿಲ್ಲೆಯ ಸಮಾಜದ ಮುಖಂಡರು ನಮ್ಮ ಜೊತೆಗೆ ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ನಿಮಗೆ ತಾಕತ್ತಿದ್ದರೆ 2ಎ ಮೀಸಲಾತಿಗೆ ಆಗ್ರಹಿಸಿ ನಾವು ನಡೆಸಿದ ಹೋರಾಟದಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ. ಸಚಿವ ಸ್ಥಾನದಿಂದ ರಾಜೀನಾಮೆ ಕೇಳಿ” ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸವಾಲು ಹಾಕಿದರು.

ಶನಿವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, “ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ರಾಜು ಕಾಗೆ, ಚನ್ನರಾಜ ಹಟ್ಟಿಹೊಳಿ ಅವರು ಹೋರಾಟದಲ್ಲಿ ಭಾಗವಹಿಸಿದ್ದರು. ನಮ್ಮ ಹೋರಾಟ ಸಂವಿಧಾನ ವಿರೋಧ ಎಂದು ಹೇಳುವ ನೀವು ಇವರ ವಿರುದ್ಧ ಕ್ರಮಕೈಗೊಳ್ಳಿ ನೋಡೋಣ” ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.

ಬಸವಜಯ ಮೃತ್ಯುಂಜಯ ಸ್ವಾಮೀಜಿ “ನಮ್ಮ ಹೋರಾಟ ಸಂವಿಧಾನ ವಿರೋಧಿ ಆಗಿದ್ದರೆ, ಪ್ರತಿಭಟನೆಗೆ ಯಾಕೆ ಅನುಮತಿ‌ ನೀಡಿದಿರಿ?. ನೀವು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ್ದೀರಿ. ಆದರೆ, ನಮ್ಮ ಸಮಾಜವನ್ನು ನಿಂದಿಸುವ ಮೂಲಕ ಬಸವಣ್ಣನವರಿಗೆ ಅವಮಾನಿಸಿದ್ದೀರಿ. ಲಿಂಗಾಯತರ ಸ್ವಾಭಿಮಾನ ಕೆಣಕಲು ಪ್ರಯತ್ನಿಸಿದ್ದೀರಿ. ನಾಲ್ಕು ವರ್ಷಗಳಿಂದ ನಾವು ಶಾಂತಿಯುತವಾಗಿ ಹೋರಾಡಿದ್ದೆವು. ಆದರೆ, ಚನ್ನಮ್ಮನ ನಾಡಿನಲ್ಲಿ ಈಗ ಕ್ರಾಂತಿ ಮಾಡಲು ಸರ್ಕಾರವೇ ಬಡಿದೆಬ್ಬಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಮಾಜದ ಬಗ್ಗೆ ನಿಮಗೆ ಕಳಕಳಿ ಇರದಿದ್ದರೆ, ಮೀಸಲಾತಿ ಕೊಡಲಾಗದು ಎಂದು ಹೇಳಿ ನಡೆಯುತ್ತದೆ. ಆದರೆ, ನಮ್ಮ ಹೋರಾಟವೇ ಸಂವಿಧಾನ‌ ವಿರೋಧಿ ಎಂದು ನೀವು ಹೇಳಿರುವುದೇ ಸಂವಿಧಾನ ವಿರೋಧಿ. ಆ ಹೇಳಿಕೆಯನ್ನು ಸದನದ ಕಡತದಿಂದ ತೆಗೆದು ಹಾಕಬೇಕು. ಅದೇ ರೀತಿ ಸಮಾಜದ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!