ನವದೆಹಲಿ-೨೬: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ದೆಹಲಿಯಲ್ಲಿ ವಿಧಿವಶರಾಗಿದ್ದು, ಈಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಇನ್ಸಾಟಾ ಗ್ರಾಮ್ ಪೋಸ್ಟ್ನಲ್ಲಿ “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ ಎಂದಿದ್ದಾರೆ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ರಾಷ್ಟ್ರಕ್ಕೆ ನಿಮ್ಮ ಸೇವೆಗಾಗಿ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ನೀವು ದೇಶಕ್ಕೆ ತಂದ ಪ್ರಗತಿಪರ ಬದಲಾವಣೆಗಳಿಗಾಗಿ ನಿಮ್ಮನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಎಂದು ವಾದ್ರಾ ಹೇಳಿದ್ದಾರೆ.