05/01/2025
IMG-20250102-WA0003

ಮುಂದಿನ ಪೀಳಿಗೆಗೆ ಮಹಾನ್ ವ್ಯಕ್ತಿಗಳ ಸಂದೇಶ ರವಾನಿಸುವ ಕೆಲಸ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ-೦೨ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಬೃಹತ್ ಮೂರ್ತಿಯ ಪ್ರತಿಷ್ಠಾಪನೆಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ಈ ಭಾಗದ ಶಾಸಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿ ಹಾಗೂ ಮಾರ್ಗದರ್ಶನದಂತೆ ಗ್ರಾಮ ಪಂಚಾಯತ್ ಕಾರ್ಯಾಲಯದ ಮಾರ್ಗದಲ್ಲಿ ಮೂರ್ತಿಯ ಪ್ರತಿಷ್ಟಾಪನೆಯ ಕಾಮಗಾರಿಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅನೇಕ ಕಡೆಗಳಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್, ಛತ್ರಪತಿ ಶಿವಾಜಿ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ ಸೇರಿದಂತೆ ಮಹನೀಯರ ಪುತ್ಥಳಿಗಳನ್ನು ಸ್ಥಾಪಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ರವಾನಿಸುವ ಕೆಲಸವನ್ನು ಮಾಡಲಾಗುತ್ತಿದೆ. ಯುವ ಜನಾಂಗ ಇಂತಹ ಆದರ್ಶ ವ್ಯಕ್ತಿಗಳಿಂದ ಸ್ಫೂರ್ತಿ ಪಡೆಯಬೇಕೆನ್ನುವುದೇ ಇದರ ಉದ್ದೇಶ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.

ಗ್ರಾಮಸ್ಥರ ಬೇಡಿಕೆಯಂತೆ ಎಲ್ಲರ ಸಹಕಾರದೊಂದಿಗೆ ಕ್ಷೇತ್ರದಲ್ಲಿ, ಮೂಲಭೂತ ಸೌಲಭ್ಯ ಸೇರಿದಂತೆ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಸಚಿವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಹಂತ ಹಂತವಾಗಿ ಜಾರಿಯಾಗಲಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಮಾಜಿಅಧ್ಯಕ್ಷರಾದ ಶಂಕರಗೌಡ ಪಾಟೀಲ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಕೆಡಿಪಿ ಸದಸ್ಯ ಬಸವರಾಜ ಮ್ಯಾಗೋಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ಕೋಲಕಾರ್, ಸದಸ್ಯರಾದ ಪಾರ್ವತಿ ತಳವಾರ, ಭಾಗ್ಯಶ್ರೀ ಹಣಬರ, ಮಲಿಕ್ ಮನಿಯಾರ್, ಇಸ್ಮಾಯಿಲ್ ಮಕಾನದಾರ್, ಬುಡಾ ಸದಸ್ಯರಾದ ನಿಲೇಶ್ ಚಂದಗಡ್ಕರ್, ಮಲ್ಲೇಶ ಚೌಗುಲೆ, ಮಹಾದೇವ ತಳವಾರ, ಗುಂಡು ತಳವಾರ, ಅಪ್ಸರ್ ಜಮಾದಾರ, ಸುರೇಶ ಕಾಳೋಜಿ, ಹೊನಗೌಡ ಪಾಟೀಲ, ಪ್ರವೀಣ ಪಾಟೀಲ, ಸುರೇಶ ಕಟಬುಗೋಳ, ನೂರ್ ಮುಲ್ಲಾ, ಜಮೀಲ್ ಕಾಜಿ, ಶರೀಫ್ ಸನದಿ, ಮಹೇಶ ಸುಗ್ನೆಣ್ಣವರ್, ಉದಯ ಪಾಟೀಲ, ಶಶಾಂಕ ಪಾಟೀಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಪಾಟೀಲ, ಮಹಾಂತೇಶ ನಾಯಕ್, ಸಂತೋಷ ಕೋಲಕಾರ, ಪ್ರಮೋದ‌ ಮೂಡಲಗಿ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!